ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆಯಲ್ಲಿ ಹಾವು ಕಂಡ ಚಾಲಕ: ಅಪಘಾತ

Published 19 ಜೂನ್ 2024, 16:07 IST
Last Updated 19 ಜೂನ್ 2024, 16:07 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ರಸ್ತೆಯಲ್ಲಿ ಹಾವು ಕಂಡು ಗೂಡ್ಸ್‌ ವಾಹನದ ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಕೋಮಲ್ ದಾಬಾ ಬಳಿ ಬುಧವಾರ ನಡೆದಿದೆ.

ಬಾಗಲಕೋಟೆಯಿಂದ ಮುದ್ದೇಬಿಹಾಳ ಕಡೆಗೆ ಬರುತ್ತಿದ್ದ ಬಸ್ ಎದುರು ಗೂಡ್ಸ್ ವಾಹನವೊಂದು ತೆರಳುತ್ತಿತ್ತು. ಗೂಡ್ಸ್ ವಾಹನ ಚಾಲಕನಿಗೆ ರಸ್ತೆಯಲ್ಲಿ ಹಾವು ಹೋಗುವುದು ಕಂಡಿದ್ದರಿಂದ ಚಾಲಕ ಬ್ರೇಕ್ ಹಾಕಿದ್ದಾನೆ. ಇದರಿಂದ ಹಿಂದೆ ಬರುತ್ತಿದ್ದ ಬಸ್ ಗೂಡ್ಸ್ ವಾಹನಕ್ಕೆ ಹಿಂಬದಿ ಡಿಕ್ಕಿ ಹೊಡೆದಿದೆ. ಸ್ ಚಾಲಕ ಮನೋಹರ ದಾಸರ ಎಂಬುವವರಿಗೆ ಗಾಯಗಳಾಗಿವೆ. ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT