ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆವಿಮೆ ಯೋಜನೆ: ರೈತರಲ್ಲಿ ಅರಿವು ಮೂಡಿಸಲು ಡಿಸಿ ಸೂಚನೆ

Published 6 ಜುಲೈ 2023, 12:36 IST
Last Updated 6 ಜುಲೈ 2023, 12:36 IST
ಅಕ್ಷರ ಗಾತ್ರ

ವಿಜಯಪುರ: ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ-ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಳೆ ವಿಮೆ ಯೋಜನೆ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕರ್ನಾಟಕ ರೈತ ಸುರಕ್ಷಾ-ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಬೆಳೆವಿಮೆ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಬೆಳೆ ವಿಮೆ ಯೋಜನೆಯಡಿ ಹೆಚ್ಚಿನ ರೈತರು ನೋಂದಾಯಿಸಿಕೊಳ್ಳಲು ಅನುಕೂಲವಾಗಲು ಯೋಜನೆ ಕುರಿತು ಅಗ್ರಿಕಲ್ಟರ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳು, ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತರಲ್ಲಿ ಬೆಳೆ ವಿಮೆ ಕುರಿತು ಜಾಗೃತಿ ಮೂಡಿಸಬೇಕು.

ಬೆಳೆ ವಿಮೆ ಮಾಡಿಸುವಾಗ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸೀಡಿಂಗ್ ಮಾಡಿಸಲು ಹಾಗೂ ಬೆಳೆ ವಿಮೆ ನೋಂದಣಿ ಮಾಡಿಸುವಾಗ ವಾರಸುದಾರರ ವಿವರವನ್ನು ಕಡ್ಡಾಯವಾಗಿ ನಮೂದಿಸಬೇಕು. ಬೆಳೆ ವಿಮೆ ಮಾಡಿಸುವ ರೈತರು ಕಡ್ಡಾಯವಾಗಿ ಎಫ್.ಆಯ್.ಡಿ. ಹೊಂದಿರಬೇಕು. ಎಫ್.ಐ.ಡಿ. ಹೊಂದಿಲ್ಲದ್ದಿದಲ್ಲಿ ಕೂಡಲೇ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ಎಫ್.ಐ.ಡಿ.ಮಾಡಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಅಧಿಸೂಚಿಸಲಾಗಿರುವ ವಿವಿಧ ಬೆಳೆಗಳ ವಿಮಾ ಮೊತ್ತ, ವಿಮಾ ಕಂತು ಮತ್ತು ನೋಂದಣಿಯ ಅಂತಿಮ ದಿನಾಂಕದ ವಿವರವನ್ನು ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಪಡೆದುಕೊಳ್ಳಬೇಕು. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಬೆಳೆ ಸಾಲ ಪಡೆಯದ ರೈತರು ಅನ್ವಯಿಸುತ್ತಾರೆ. ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ ಪಾಸ್ ಬುಕ್ ಮತ್ತು ಆಧಾರ ಸಂಖ್ಯೆಯೊಂದಿಗೆ ಡಿಸಿಸಿ-ಇತರೆ ಬ್ಯಾಂಕ್, ಗ್ರಾಮ ಒನ ಮತ್ತು ಸಿ.ಎಸ್.ಸಿ. ಕೇಂದ್ರಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಅವರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT