ಬುಧವಾರ, ಡಿಸೆಂಬರ್ 1, 2021
26 °C

ಬಸವನಬಾಗೇವಾಡಿ: ಬೆಳೆ ಹಾನಿ ಪರಿಶೀಲಿಸಿದ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಮುತ್ತಗಿ, ಹೂವಿನಹಿಪ್ಪರಗಿ, ಮನಗೂಳಿ, ಟಕ್ಕಳಕಿ ಹಾಗೂ ವಿವಿಧ ಗ್ರಾಮಗಳ ಜಮೀನುಗಳಿಗೆ ಬುಧವಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಬೆಳೆಹಾನಿ ಮಾಹಿತಿ ಸಂಗ್ರಹಿಸಿದರು.

ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ ಜಮೀನುಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ವಾಣಿಜ್ಯ ಬೆಳೆಗಳಾದ ತೊಗರಿ, ಗೋಧಿ, ಅಜವಾನ, ಹತ್ತಿ ಸೇರಿದಂತೆ ವಿವಿಧ ಬೆಳೆಗಳ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು. ತೊಗರಿ, ಗೋವಿನಜೋಳ ಹಾಳಾಗಿದೆ. ಗೋಧಿ, ಕಡಲೆ, ಬಿಳಿಜೋಳದ ಬೆಳೆಗೆ ಈ ಅಕಾಲಿಕ ಮಳೆ ಅನುಕೂಲವಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್. ಯರಝರಿ ತಿಳಿಸಿದರು.

ಬೆಳೆ ಹಾನಿಯ ನಿಖರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ರೈತರಿಗೆ ಭರವಸೆ ನೀಡಿದರು.
ಬೆಳೆ ಹಾನಿ ಸಮೀಕ್ಷೆಯಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ. ರಾಶೇಖರ ಮಿಲಿಯಮ್ಸ್, ಡಾ. ಅಶೋಕ ಸಜ್ಜನ, ಕೃಷಿ ವಿಜ್ಞಾನಿ ಡಾ. ಎಂ.ಎಸ್.ವಸ್ತ್ರದ, ತಾಲ್ಲೂಕು ಕೃಷಿ ಅಧಿಕಾರಿ ಸಿ.ಎಂ. ಹಿರೇಮಠ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ದ್ಯಾಮನಗೌಡ ಪಾಟೀಲ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು