ವಿಜಯಪುರ: ‘ತಂತ್ರಜ್ಞಾನದ ಇಂದಿನ ದಿನಮಾನದಲ್ಲಿ ಡಿಜಿಟಲ್ ಅಪರಾಧಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಅಂತರ್ಜಾಲದ ಬಳಕೆಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

ಬಿಎಲ್ಡಿಇ ಕಾನೂನು ಶಾಲೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಬಿಎಲ್ಡಿಇ ಕೇಂದ್ರಿಯ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ಕಾನೂನು ಮತ್ತು ಸೈಬರ್ ಅಪರಾಧಗಳ ಕುರಿತು ರಾಷ್ಟ್ರಮಟ್ಟದ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸೈಬರ್ ಅಪರಾಧಗಳು ಯಾವುದೇ ಗಡಿ ಹೊಂದಿಲ್ಲ, ಹಲವಾರು ಅನಕ್ಷರಸ್ಥರು ಹಾಗೂ ಅಕ್ಷರಸ್ಥರು ಸಹ ಈ ಒಂದು ಸೈಬರ್ ಅಪರಾಧ ಹಾಗೂ ವಂಚನೆಗೆ ಬಲಿಯಾಗಿರುವ ಅನೇಕ ಪ್ರಕರಣಗಳನ್ನು ಕಾಣಬಹುದಾಗಿದೆ. ಸೈಬರ್ ಅಪರಾಧಗಳು ಸವಾಲಾಗಿ ಪರಿಣಮಿಸಿದೆ’ ಎಂದರು.

‘ಇಂಟರ್ನೆಟ್ ಹೊಂದಿರುವ ಸ್ಮಾರ್ಟ್ಫೋನ್ ಬಳಕೆ ಹೆಚ್ಚಾಗಿರುವ ಪರಿಣಾಮ ಡ್ರಗ್ಸ್, ಮಾನವ ಕಳ್ಳಸಾಗಾಣಿಕೆಗಳಂತಹ ಅಪರಾಧ ಹಾಗೂ ವಂಚನೆ ಎಸಗಲು ಅಪರಾಧಿಗಳಿಗೆ ಆನ್ಲೈನ್ ನಲ್ಲಿ ಅನೇಕ ಸಾಧನಗಳು ಲಭ್ಯವಿವೆ. ಸೈಬರ್ ಅಪರಾಧಗಳನ್ನು ಅಲ್ಲಗಳೆಯದೇ ಅವುಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಯಾವುದೇ ಸೈಬರ್ ಅಪರಾಧಗಳು ಜರುಗಿದಲ್ಲಿ ಪ್ರಕರಣ ದಾಖಲಿಸಿ ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥಪಡಿಸಲು ಸುಮಾರು 100 ನುರಿತ ತರಬೇತಿ ಪಡೆದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.

‘ಪೊಲೀಸ್ ಇಲಾಖೆ ಮೂಲಕ ಜಿಲ್ಲೆಯಾದ್ಯಂತ ಸೈಬರ್ ಅಪರಾಧ ಹಾಗೂ ಅವುಗಳ ಪ್ರಕಾರಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ನೀಡಲಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಪ್ರತಿವಾರ ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಭಿಯಾನವನ್ನು ಕೈಗೊಳ್ಳುವುದರಿಂದ ವಿದ್ಯಾರ್ಥಿಗಳು ಸೈಬರ್ ವಂಚನೆ ತಡೆಗಟ್ಟುವಲ್ಲಿ ನೆರೆಹೊರೆಯವರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಜನರನ್ನು ಜಾಗೃತರಾಗಿರಲು ಸಹಕಾರಿಯಾಗಿದೆ’ ಎಂದು ಹೇಳಿದರು.

ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಸಮ ಕುಲಾಧಿಪತಿ ವೈ.ಎಂ.ಜಯರಾಜ, ವಂಚಕರು ಮೊಬೈಲ್ ಅಪ್ಲಿಕೇಶನ್ ಮೂಲಕ ಸಾಲ ಸೌಲಭ್ಯ ನೀಡುವ ಆಸೆ ಹುಟ್ಟಿಸಿ ವಂಚಿಸುವ ಪ್ರಕರಣಗಳು, ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚಿಸುವ ಪ್ರಕರಣಗಳು, ಡಿಜಿಟಲ್ ಅರೆಸ್ಟ್ ಸಂಬಂಧಿತ ವಂಚನೆಗಳು, ಸಿಮ್ ಸ್ವಾಪಿಂಗ್ ಪ್ರಕರಣಗಳು, ಹ್ಯಾಕಿಂಗ್ ಪ್ರಕರಣಗಳು ಸೈಬರ್ ಅಪರಾಧಕ್ಕೆ ಉದಾಹರಣೆಯಾಗಿವೆ ಎಂದು ಹೇಳಿದರು.

ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಸುನೀಲ್ ಬಗಾಡೆ, ಹೊಳೆನರಸೀಪುರದ ಸರ್ಕಾರಿ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಎಂ.ಕೆ ಮಾಟೋಳ್ಳಿ, ಬೆಂಗಳೂರಿನ ಸೈಬರ್ ಕ್ರೈಂ ವಿಭಾಗ ಸಿ.ಐ.ಡಿ ಡಿ.ವೈ.ಎಸ್.ಪಿ, ಯಶವಂತ್ ಕುಮಾರ, ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಮತ್ತು ಆಡಳಿತ ಮಹಾವಿದ್ಯಾಲಯದ ಕಂಪ್ಯೂಟರ್ ಎಂಜಿನಿಯರ್ ವಿಭಾಗದ ಪ್ರಾಧ್ಯಾಪಕ ಡಾ. ಅನಂತಪ್ರಭು, ಬಿ.ಎಲ್.ಡಿ.ಇ ಕಾನೂನು ಶಾಲೆಯ ಡೀನ್ ಹಾಗೂ ಪ್ರಾಂಶುಪಾಲ ಡಾ. ರಘುವೀರ ಕುಲಕರ್ಣಿ, ಬಿ.ಎಲ್.ಡಿ.ಇ ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕರು ಕೆ.ಶೇಷಾದ್ರಿ ಇದ್ದರು.

ಸೈಬರ್ ಅಪರಾಧಕ್ಕೆ ಅಥವಾ ವಂಚನೆಗೆ ಒಳಗಾದರೆ ಧೈರ್ಯವಾಗಿ 1930 ಉಚಿತ ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ
–ಲಕ್ಷ್ಮಣ ನಿಂಬರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.