ಶನಿವಾರ, ಮೇ 28, 2022
31 °C

ವಿಜಯಪುರ: ಸೈಕ್ಲಿಂಗ್ ವೆಲೊಡ್ರೋಮ್‌ ಕಾಮಗಾರಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ನಗರದ ಭೂತನಾಳ  ಗ್ರಾಮದ ಹತ್ತಿರ ನಿರ್ಮಾಣದ ಹಂತದಲ್ಲಿರುವ ಸೈಕ್ಲಿಂಗ್ ವೆಲೊಡ್ರೋಮ್‌ ಕಾಮಗಾರಿ ಪರಿಶೀಲನೆ ಮಾಡಿದರು.

ವೆಲೊಡ್ರೋಮ್‌ ಕಾಮಗಾರಿ ಬಗ್ಗೆ ಕ್ರೀಡಾ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಮಾಹಿತಿ ಪಡೆದ ಅವರು, ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚಿಸಿದರು. 

ಬಳಿಕ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಅಥ್ಲೆಟಿಕ್ ಸಿಂಥೆಟಿಕ್ ಟ್ರ್ಯಾಕ್, ವಾಲಿಬಾಲ್ ಮೈದಾನ, ಬ್ಯಾಸ್ಕೆಟ್‌ಬಾಲ್ ಮೈದಾನ,  ಈಜುಗೊಳ, ಒಳಾಂಗಣ ಕ್ರೀಡಾಂಗಣ ಹಾಗೂ ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಹಾಯಕ ಆಯುಕ್ತ ಬಲರಾಮ ಲಮಾಣಿ,  ಕಾರ್ಯನಿರ್ವಾಹಕ ಎಂಜಿನಿಯರ್‌ ಹೀರೇಗೌಡರ, ಪಾಲಿಕೆ ಆಯುಕ್ತ  ವಿಜಯ ಮೆಕ್ಕಳಕಿ, ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಅಧ್ಯಕ್ಷ ರಾಜು ಬಿರಾದಾರ, ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭೀಮಸೇನ ಕೋಕರೆ, ಸಹಾಯಕ ನಿರ್ದೇಶಕ ಕ್ರೀಡಾ ಇಲಾಖೆ ಎಸ್.ಜಿ.ಲೋಣಿ, ವಿವಿಧ ಕ್ರೀಡಾ ಸಂಸ್ಥೆಯ ಪದಾಧಿಕಾರಿಗಳು, ತರಬೇತಿದಾರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.