ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದರ್ಶನ್ ಪ್ರಕರಣ | ತಪ್ಪಿತಸ್ಥರಿಗೆ ಶಿಕ್ಷೆ ನಿಶ್ಚಿತ: ಎಂ.ಬಿ.ಪಾಟೀಲ

Published 15 ಜೂನ್ 2024, 19:59 IST
Last Updated 15 ಜೂನ್ 2024, 19:59 IST
ಅಕ್ಷರ ಗಾತ್ರ

ವಿಜಯಪುರ: ‘ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿದ್ದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ ಜೈಲು ಪಾಲು ಎಂದು ಸಿ.ಪಿ.ಯೋಗೇಶ್ವರ ಹೇಳಿಕೆ ನೀಡಿದ್ದು ಸರಿಯಲ್ಲ. ಹಾಸನದಲ್ಲಿ ಪ್ರಜ್ವಲ್‌ ಸಂಸದ ಆಗಿರಲಿಲ್ಲವೇ? ಅದನ್ನೆ ನಾವು ಉಲ್ಟಾ ಕೇಳಿದರೇ ಹೇಗೆ’ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಪ್ರಶ್ನಿಸಿದರು.

‘ನಟ ದರ್ಶನ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಆಗುವ ಬಗ್ಗೆ ಮಾಹಿತಿ ನನಗೆ ಗೊತ್ತಿಲ್ಲ. ಅಭ್ಯರ್ಥಿ ಮಾಡುವ ಉದ್ದೇಶವಿದ್ದರೂ ಅವರ ಮೇಲೆ ಆ ಸಂದರ್ಭದಲ್ಲಿ ದೂರುಗಳು ಇರಲಿಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆ ನಿಶ್ಚಿತ. ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಸ್ವತಃ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ಸ್ಪಷ್ಟಪಡಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT