ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ನೀರು ಸಂಗ್ರಹಕ್ಕೆ ಡಿಸಿ ಸಲಹೆ

Last Updated 3 ಮಾರ್ಚ್ 2021, 13:50 IST
ಅಕ್ಷರ ಗಾತ್ರ

ವಿಜಯಪುರ: ಮಳೆ ನೀರು ಸಂಗ್ರಹದಿಂದ ಬೇಸಿಗೆಯಲ್ಲಿ ಜನ, ಜಾನುವಾರುಗಳಬಳಕೆಗೆ ಸಹಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮಳೆ ನೀರು ಸಂಗ್ರಹಣಾ ಜಾಗೃತಿ ಅಭಿಯಾನವನ್ನು ಪ್ಲೇ ಕಾರ್ಡ್ ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಳೆ ನೀರು ಸಂಗ್ರಹದಿಂದ ಅಂತರ್ ಜಲ ಹೆಚ್ಚಳದ ಜೊತೆಗೆ ನಾವು ಅರಣ್ಯ ಬೆಳೆಸಬಹುದು. ಕಾಡು ಬೆಳೆಯುವುದರಿಂದ ಮಳೆ ಬರುವಂತೆ ಮಾಡಬಹುದು. ಆದ್ದರಿಂದ ನಾವು ಜಲವನ್ನು ಹೆಚ್ಚು ಸಂಗ್ರಹಣೆ ಮಾಡಲು ಅನುಕೂಲವಾಗುತ್ತದೆ ಹಾಗೂ ವಾತಾವರಣ ಕೂಡ ತಂಪಾಗಿ ಇಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜನರು ಮರಗಳನ್ನು ಕಡಿಯಬಾರದು, ಅರಣ್ಯ ಉಳಿಸಬೇಕು, ಗಿಡಗಳನ್ನು ನೆಡಬೇಕು. ತೊಟ್ಟಿಗಳನ್ನು ನಿರ್ಮಾಣ ಮಾಡುವುದರ ಮೂಲಕ ನೀರನ್ನು ಸಂಗ್ರಹಿಸಿ ಪುನರ್ಬಳಕೆ ಮಾಡಲು ಸಹಾಯಕವಾಗುತ್ತದೆ. ಆದ್ದರಿಂದ ಮಳೆ ಕೊಯ್ಲಿಗೆ ಪ್ರಾಧಾನ್ಯತೆ ನೀಡಬೇಕು. ಮನೆ ಛಾವಣಿಗಳ ಮೇಲೆ ನೀರನ್ನು ಸಂಗ್ರಹಿಸಬೇಕು ಮತ್ತು ಬಳಸಬೇಕು ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಸ್.ಎಸ್.ರಾಜಮಾನೆ, ಜಾವಿದ್ ಜಮಾದಾರ್, ಪೀಟರ್ ಅಲೆಕ್ಸಾಂಡರ್, ರಾಹುಲ್ ಡೊಂಗ್ರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT