ವಿಜಯಪುರ: ಆಗಸ್ಟ್ 15 ರಂದು ಜರಗುವ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಪ್ಲಾಸ್ಟಿಕ್ ಧ್ವಜ ಬಳಸದಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಅಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸುವಂತೆಯೂ ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಶಿಸ್ತಿನ ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಆಂಬುಲೆನ್ಸ್ ಸಹಿತ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ವೇದಿಕೆ ನಿರ್ಮಾಣ ಮತ್ತು ನಿರ್ವಹಣೆ, ವೇದಿಕೆ ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಭದ್ರತೆ, ಕ್ರೀಡಾಂಗಣದ ಸ್ವಚ್ಛತೆ ಸೇರಿದಂತೆ ಸಿದ್ಧತಾ ಕಾರ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ, ವಹಿಸಿದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಂದು ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸ್ವಾತಂತ್ರ್ಯದ ಮುನ್ನಾದಿನ ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಎಲ್ಲಾ ಕಚೇರಿಗಳಲ್ಲಿ ಶ್ರಮದಾನ ಮಾಡುವ ಮೂಲಕ ಕಚೇರಿ ಆವರಣವನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು
-ಡಾ.ಆನಂದ್.ಕೆಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.