ಸೋಮವಾರ, ಜನವರಿ 17, 2022
20 °C

ಗುಣಮಟ್ಟ ರಸ್ತೆ ಕಾಮಗಾರಿಗೆ ಡಿಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರದಿಂದ ನಗರ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ರಸ್ತೆ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಭಾನುವಾರ ಪರಿಶೀಲಿಸಿದರು.

ನಗರದ ಬಾಗಲಕೋಟೆ ಕ್ರಾಸ್‍ನಿಂದ ಆರ್. ಟಿ. ಓ ಕಚೇರಿ ವರೆಗೆ, ಕೇಂದ್ರ ಬಸ್ ನಿಲ್ದಾಣದಿಂದ ಮೀನಾಕ್ಷಿ ಸರ್ಕಲ್‍ ವರೆಗೆ, ಜೋಡಗುಮ್ಮಟದಿಂದ ತಾಜ್‌ ಬಾವಡಿಯವರೆಗೆ ಹಾಗೂ ಸರಾಫ್ ಬಜಾರ ರಸ್ತೆಯ ಕಾಮಗಾರಿ ಪರಿಶೀಲಿಸಿದರು.

ದುರಸ್ತಿ ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯು.ಜಿ.ಡಿ ಚೇಂಬರ್ ಕವರ್‌ಗಳನ್ನು ಸರಿಯಾಗಿ ನಿರ್ಮಿಸಬೇಕು ಹಾಗೂ ರಸ್ತೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಅಧಿಕಾರಿಗಳಿಗೆ ಸೂಚಿಸಿದರು. 

ರಸ್ತೆಯ ಎರಡು ಬದಿ ಮಳೆ ನೀರು ಸರಾಗವಾಗಿ ಹೋಗಲು ಚರಂಡಿ ಹೂಳನ್ನು ತೆಗೆಸಬೇಕು ಹಾಗೂ ಕಾಲಕಾಲಕ್ಕೆ ಈ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.