ವಿಜಯಪುರ: ನಗರದ ಕೇಂದ್ರ ಕಾರಾಗೃಹದಲ್ಲಿ ಇದ್ದ ವಿಚಾರಣಾಧೀನ ಕೈದಿ ಮಂಗಳವಾರ ಜಿಲ್ಲಾಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

ಮೂಲತಃ ಬಾಗಲಕೋಟೆ ನಿವಾಸಿಯಾದ ಬಸವರಾಜ ತಳವಾರ(32) ಸಾವಿಗೀಡಾದ ಕೈದಿ. ಆಲಮಟ್ಟಿಯಲ್ಲಿ ಸೆ.28ರಂದು ನಡೆದ ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಪೊಲೀಸರು ಬಂಧಿಸಿ, ಜೈಲಿಗೆ ಕಳುಹಿಸಿದ್ದರು.

ಕೈದಿ ಸಾವಿನ ಬಗ್ಗೆ ಕುಟುಂಬದವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆಯಾಗಬೇಕು, ನ್ಯಾಯ ಸಿಗಬೇಕು ಎಂದು ಮೃತನ ಸಹೋದರ ಹಣಮಂತ ತಳವಾರ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್,‘ಎರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಆರೋಪಿಯನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾನೆ’ ಎಂದು ಹೇಳಿದರು.

‘ಕುಟುಂಬದವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.