ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕ ಪರಿಶೀಲನೆ

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಶನಿವಾರ ಪರಿಶೀಲನೆ ನಡೆಸಿದರು.
22ನೇ ವಾರ್ಡ್ನಲ್ಲಿ ನಿರ್ಮಿಸಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಿದ ಅವರು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಜೊತೆಗೆ ಅಧಿಕೃತ ಪ್ರಯೋಗಾಲಯದಿಂದ ವರದಿ ಪಡೆದು ಗೊಬ್ಬರ ಮಾರಾಟ ಮಾಡುವಂತೆ ಸೂಚನೆ ನೀಡಿದರು.
ವಾರ್ಡ್ ನಂ 14 ರ ಡಾಲರ್ಸ್ ಕಾಲೊನಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು, ಘಟಕ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಡಿ.ಎಚ್. ಕಿರೇಸೂರ, ಡಿಯುಡಿಸಿ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ) ಎಸ್.ಎಸ್.ಸುರ್ಖಿ, ಪರಿಸರ ಎಂಜಿನಿಯರ್ ಡಾ.ಪ್ರಕಾಶ ಗೂಳಪ್ಪಗೊಳ, ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.