ಶುಕ್ರವಾರ, ಜುಲೈ 23, 2021
23 °C

ಬಸವನ ಬಾಗೇವಾಡಿ | ಆರೋಗ್ಯ ಕವಚ ವಾಹನದಲ್ಲೇ ಹೆರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಜಾಯವಾಡಗಿಯಿಂದ ಬಸವನ ಬಾಗೇವಾಡಿ ಆಸ್ಪತ್ರೆಗೆ ಗರ್ಭಿಣಿಯನ್ನು 108 ಅಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ ವಾಹನದಲ್ಲೇ ಮಹಿಳೆಗೆ ಹೆರಿಗೆಯಾಗಿದೆ.

ಪರ್ವೀನ್ ಚಪ್ಪರಬಂದ್ ಎಂಬುವವರು ಹೆಣ್ಣು‌ ಮಗುವಿಗೆ ಅಂಬುಲೆನ್ಸ್‌ನಲ್ಲೇ ಜನ್ಮ ನೀಡಿದ್ದಾರೆ. ತಾಯಿ‌-ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಹೆರಿಗೆ ಬಳಿಕ ಬಸವನ‌ ಬಾಗೇವಾಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಂಬುಲೆನ್ಸ್ ಸಿಬ್ಬಂದಿ ವಿಜಯಕುಮಾರ ಹಾಗೂ ಪೈಲಟ್ ವಿಜಯ ಅವರು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು