ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಆಗಸ್ಟ್ 15ರೊಳಗೆ ಶೂ ವಿತರಣೆ ಕಡ್ಡಾಯ

Published 8 ಆಗಸ್ಟ್ 2023, 14:37 IST
Last Updated 8 ಆಗಸ್ಟ್ 2023, 14:37 IST
ಅಕ್ಷರ ಗಾತ್ರ

ವಿಜಯಪುರ: ಎಲ್ಲ ಶಾಲೆಯ ಮಕ್ಕಳಿಗೆ ಆಗಸ್ಟ್ 15ರೊಳಗಾಗಿ ಕಡ್ಡಾಯವಾಗಿ ಶೂಗಳನ್ನು ವಿತರಿಸುವಂತೆಯೂ, ವಿತರಣೆ ಮಾಡದಿದ್ದಲ್ಲಿ ಸಂಬಂಧಪಟ್ಟ ಶಾಲೆಯ ಮುಖ್ಯ ಶಿಕ್ಷಕ, ಬಿ.ಆರ್.ಪಿ, ಸಿ.ಆರ್.ಪಿ ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಉಪ ನಿರ್ದೇಶಕರು ಹಾಗೂ ಬಿಇಒ ಅವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಚ್ ಅಭಿಯಾನದ ಕುರಿತು ಮಂಗಳವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಚ್ ಅಭಿಯಾನಕ್ಕೆ ಒಂದೇ ವಾರದಲ್ಲಿ 40ಕ್ಕೂ ಅಧಿಕ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಉಪಯೋಗಿಸದೇ ಉಳಿದಿರುವ 1 ಸಾವಿರಕ್ಕೂ ಹೆಚ್ಚು ಬೆಂಚ್‌ಗಳನ್ನು ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸಲಾಗಿದೆ. ಇದರಿಂದ 3 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. 60 ಗ್ರಾಮ ಪಂಚಾಯಿತಿಗಳಿಂದ ಸುಮಾರು 230 ಅಂಗನವಾಡಿಗಳಿಗೆ ಚಿಕ್ಕದಾದ ಬೆಂಚ್ ಗಳನ್ನು ಮತ್ತು ಚಿಕ್ಕ ಮಕ್ಕಳಿಗೆ ಅನುಕೂಲವಾಗುವ ಕುರ್ಚಿಗಳನ್ನು ಒದಗಿಸಿದೆ. ಇನ್ನೂ ಬೆಂಚ್‌ಗಳ ಬೇಡಿಕೆಯಿರುವ ಶಾಲೆಗಳನ್ನು ಗುರುತಿಸಿ ಆ ಶಾಲೆಗಳಿಗೆ ಬೆಂಚ್ ಪೂರೈಸುವ ಅವಶ್ಯಕ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಮೂರನೇ ಶನಿವಾರ ಎಲ್ಲ ಅಂಗನವಾಡಿಗಳಲ್ಲಿ ಹಾಗೂ ನಾಲ್ಕನೇ ಶನಿವಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪಾಲಕರ ಸಭೆ ಆಯೋಜಿಸಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಸಹಭಾಗಿತ್ವ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಎನ್.ಎಚ್.ನಾಗೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT