ಬುಧವಾರ, ಜೂನ್ 23, 2021
29 °C

ಪೊಲೀಸರಿಂದ ಲಂಚಕ್ಕೆ ಬೇಡಿಕೆ: ಪೆಟ್ರೋಲಿಂಗ್ ವಾಹನಕ್ಕೆ ಅಡ್ಡಮಲಗಿದ ಲಾರಿ ಚಾಲಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಇಲ್ಲಿನ ವಿಜಯಪುರ–ಅಥಣಿ ಹೆದ್ದಾರಿಯಲ್ಲಿ ಸಂಚರಿಸುವ ಲಾರಿಗಳನ್ನು ವಿನಾಕಾರಣ ತಡೆದು ನಿಲ್ಲಿಸಿ, ಲಂಚಕ್ಕೆ ಬೇಡಿಕೆ ಇಟ್ಟ  ಹೈವೇ ಪೆಟ್ರೋಲಿಂಗ್‌ ಪೊಲೀಸ್ ವಾಹನದ ಎದುರು ಅನ್ಯ ರಾಜ್ಯದ ಲಾರಿ ಚಾಲಕರೊಬ್ಬರು ಅಡ್ಡಲಾಗಿ ಮಲಗಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಲಾರಿ ಚಾಲಕ ಅಡ್ಡಲಾಗಿ ಮಲಗಿ ಪ್ರತಿರೋಧ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರವೇ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ಇಬ್ಬರು ಪೊಲೀಸರನ್ನು ಅಮಾನತು ಮಾಡಿದ್ದಾರೆ.

ತಿಕೋಟಾ ಪೊಲೀಸ್‌ ಠಾಣೆಯ ಎಎಸ್‌ಐ ಎಂ.ಎಸ್‌.ವಾಲಿಕಾರ ಹಾಗೂ ವಿಜಯಪುರ ಡಿಎಆರ್‌ ಘಟಕದ ಎ.ಎಸ್‌.ಐ ಯು.ಬಿ.ಚಿಗರೊಳ್ಳಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಲಾರಿ ಚಾಲಕರಿಂದ ಹಣ ವಸೂಲಿ ಮಾಡುವ ವಿಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಪರಿಶೀಲಿಸಿ, ಇಲಾಖಾ ವಿಚಾರಣೆಯನ್ನು ಬಾಕಿ ಇಟ್ಟು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು