ವಿಜಯಪುರ: ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.

ದಾರಿಯುದ್ದಕ್ಕೂ ನೂರಾರು ಉದ್ಯೋಗಾಕಾಂಕ್ಷಿಗಳು ‘ಖಾಲಿ ಹುದ್ದೆ ಭರ್ತಿ ಮಾಡಿ’, ‘ಸರ್ಕಾರಿ ಹುದ್ದೆ ಭರ್ತಿ ಮಾಡಿ - ಉದ್ಯೋಗಿಗಳ ಹಿತ ಕಾಪಾಡಿ’ ಎಂಬಿತ್ಯಾದಿ ಸಂದೇಶಗಳ ಫಲಕಗಳನ್ನು ಪ್ರದರ್ಶಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು.

ಎಐಡಿವೈಒ ರಾಜ್ಯ ಘಟಕದ ಅಧ್ಯಕ್ಷ ಶರಣಪ್ಪ ಉದ್ಬಾಳ ಮಾತನಾಡಿ, ‘ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಿದ್ದರು ಹಾಗೂ 56,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಅಧಿವೇಶನ ಮುಗಿದು ಮೂರ್ನಾಲ್ಕು ತಿಂಗಳು ಕಳೆದರೂ ಇನ್ನೂ ಯಾವುದೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ. ವಯೋಮಿತಿ ಸಡಿಲಿಕೆ ಮಾಡಿದರೂ ಅದರ ಅನುಕೂಲ ಆಗದೆ ಇರುವುದರಿಂದ ಉದ್ಯೋಗ ಆಕಾಂಕ್ಷಿಗಳು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. 56,432 ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗಾರ್ಹ, ಆದರೆ ಕಾಲ ವಿಳಂಬ ಮಾಡದೆ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಬೇಕು’ ಎಂದರು.

ರಾಜ್ಯ ಸಂಚಾಲಕ ಸಿದ್ಧಲಿಂಗ ಬಾಗೇವಾಡಿ ಮಾತನಾಡಿ, ‘ತೀರಾ ಅಪರೂಪಕ್ಕೆ ನಡೆಯುವ ನೇಮಕಾತಿಗಳಲ್ಲಿಯೂ ಭ್ರಷ್ಟಾಚಾರ, ಹಗರಣಗಳೇ ತುಂಬಿ ತುಳುಕುತ್ತಿವೆ. ಸರ್ಕಾರ ಈ ಪ್ರಕರಣದ ಸಮಗ್ರ ತನಿಖೆ ನಡೆಸಿ, ಹಗರಣ ನಡೆದಿರುವುದು ಸಾಬೀತಾದರೆ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಹಾಗೂ ಪಿ.ಸಿ. ಹೋಟಾ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು.

ಎಐಡಿವೈಒನ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಜಿಲ್ಲಾ ಕಾರ್ಯದರ್ಶಿ ಸಿದ್ರಾಮಯ್ಯ ಹಿರೇಮಠ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಘಟಕದ ಸದಸ್ಯ ರಘುವೀರ ಬಿಸನಾಳ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.