ವಿಜಯಪುರ: 2024–25ನೇ ಸಾಲಿನಲ್ಲಿ ಬೆಳೆ ವಿಮೆ (ಫಸಲ್ ಬಿಮಾ) ಯೋಜನೆಯಡಿ ವಿಮೆ ಕಂತು ತುಂಬಿದ ಜಿಲ್ಲೆಯ 931 ದ್ರಾಕ್ಷಿ ಬೆಳೆಗಾರರ ಖಾತೆಗೆ ಇನ್ನೂ ವಿಮಾ ಪರಿಹಾರ ಪಾವತಿ ಆಗಿಲ್ಲ. ಕೂಡಲೇ ವಿಮೆ ಹಣ ಪಾವತಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 15 ಸಾವಿರಕ್ಕೂ ಅಧಿಕ ದ್ರಾಕ್ಷಿ ಬೆಳೆಗಾರರು ವಿಮೆ ಮಾಡಿಸಿದ್ದರು. ಆ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಬೆಳೆನಷ್ಠವಾಗಿ ರೈತರು ನಷ್ಠಕ್ಕೆ ಒಳಗಾಗಿದ್ದರು. ಅದರಲ್ಲಿ 931 ಬೆಳೆಗಾರರನ್ನು ಹೊರತು ಪಡಿಸಿ ಉಳಿದವರಿಗೆ ವಿಮಾ ಪರಿಹಾರ ಬಂದಿದೆ ಎಂದು ಹೇಳಿದರು.

ಬಬಲೇಶ್ವರ ತಾಲ್ಲೂಕಿನ ಬಹುತೇಕ ಬೆಳೆಗಾರರಿಗೆ ವಿಮೆ ಹಣ ಲಭಿಸದೇ ತೊಂದರೆಗೆ ಒಳಗಾಗಿದ್ದಾರೆ. ಈ ಬಗ್ಗೆ ಕ್ಷೇತ್ರದ ಶಾಸಕರಾದ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಬೇಕು, ತಕ್ಷಣ ಸಂಬಂಧಪಟ್ಟ ವಿಮಾ ಕಂಪನಿಯೊಂದಿಗೆ ಮಾತನಾಡಿ, ಪರಿಹಾರ ಮೊತ್ತ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಅತಿವೃಷ್ಟಿ, ಅನಾವೃಷ್ಟಿ, ರೋಗಬಾಧೆ ಹೀಗೆ ಅನೇಕ ಸಮಸ್ಯೆಗಳು ದ್ರಾಕ್ಷಿ ಬೆಳೆಗಾರರನ್ನು ಕಾಡುತ್ತಲೇ ಇವೆ, ಈಗ ಇನ್ಶ್ಯೂರೆನ್ಸ್ ಕಂಪನಿಗಳು ಸಹ ರೈತರನ್ನು ಕಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬೌದ್ಧಿಕ ದಿವಾಳಿ

ಇರಾನ್–ಇಸ್ರೇಲ್–ಅಮೇರಿಕಾ ನಡುವಿನ ದಿಢೀರ್ ಯುದ್ಧದ ಪರಿಣಾಮ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದೆಲ್ಲ ಗೊತ್ತಿದ್ದೂ ಕಾಂಗ್ರೆಸ್ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದಾಖಲೆಯ ಬಜೆಟ್ ಮಂಡಿಸಿದರು. ಆದರೆ, ರಾಜ್ಯದ ಪರಿಸ್ಥಿತಿ ಎಲ್ಲಿಗೆ ಬಂದು ಮುಟ್ಟಿದೆ ಎಂದರೆ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ವೇತನ ಕೊಡಲೂ ಸಾಧ್ಯವಾಗಿಲ್ಲ. ಕಳೆದ ಫೆಬ್ರುವರಿ ತಿಂಗಳ ವೇತನವನ್ನೇ ನೀಡಲಾಗದ ಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.

ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ವಿಜಯ್ ಜೋಶಿ, ಸತ್ಯನಾರಾಯಣ ಹೇಮಾದ್ರಿ ಇದ್ದರು.

ನಕಲಿ ಕ್ಷೇತ್ರ ನೆಪವೊಡ್ಡಿ ವಿಮಾ ಹಣ ನೀಡದೇ ಸತಾಯಿಸಲಾಗುತ್ತಿದ್ದು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಬೇಕು ಇಲ್ಲವಾದರೆ ರೈತರೊಂದಿಗೆ ಹೋರಾಟ ನಡೆಸಲಾಗುವುದು.
– ಗುರುಲಿಂಗಪ್ಪ ಅಂಗಡಿಅಧ್ಯಕ್ಷ ಬಿಜೆಪಿ ಜಿಲ್ಲಾ ಘಟಕ ವಿಜಯಪುರ

ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ ಸಿಎಂ

ವಿಜಯಪುರ: ‘ಆರ್ಥಿಕ ತಜ್ಞರು ಎನಿಸಿಕೊಂಡಿರುವ 17 ಬಾರಿ ದಾಖಲೆಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿ ಸಾಲದ ಸುಳಿಗೆ ಸಿಲುಕಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ ಆರೋಪಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ದೇಶದಲ್ಲಿ ಆರ್ಥಿಕವಾಗಿ ಬಲಿಷ್ಠ ರಾಜ್ಯವಾಗಿರುವ ಕರ್ನಾಟಕದಲ್ಲಿ ಸತತ ನಾಲ್ಕು ಬಾರಿ ರಾಜಸ್ವ ಕೊರತೆ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞ ಎನಿಸಿಕೊಳ್ಳಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.

‘ಸ್ವಾತಂತ್ರ್ಯ ಬಂದಲ್ಲಿಂದ ಇಲ್ಲಿಯವರೆಗೆ ರಾಜ್ಯವನ್ನು ಆಳ್ವಿಕ ಮಾಡಿದ ಎಲ್ಲ ಮುಖ್ಯಮಂತ್ರಿಗಳು ಸೇರಿ ಇದುವರೆಗೆ ಮಾಡಿರುವ ಸಾಲದ ಮೊತ್ತ ಒಟ್ಟು ₹8.30 ಲಕ್ಷ ಕೋಟಿ. ಇದರಲ್ಲಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರೇ ಮಾಡಿರುವ ಸಾಲದ ಮೊತ್ತ ₹5.55 ಲಕ್ಷ ಕೋಟಿಯಾಗಿದೆ’ ಎಂದು ಆರೋಪಿಸಿದರು.

‘ಗ್ಯಾರಂಟಿ ಯೋಜನೆ ನೆಪದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಸೌಲಭ್ಯಗಳು ತಲುಪುತ್ತಿಲ್ಲ. ಸಿದ್ದರಾಮಯ್ಯ ಮಹಾ ಸುಳ್ಳುಗಾರ’ ಎಂದು ದೂರಿದರು.

‘ಕೇಂದ್ರದ ಅನುದಾನದಲ್ಲಿ ಸದ್ಯ ರಾಜ್ಯ ಸರ್ಕಾರ ನಡೆಯುತ್ತಿದೆ. ರಾಜ್ಯ ದಿವಾಳಿಯಾಗಿದೆ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಸಚಿವರ ಲೂಟಿಯಿಂದ ರಾಜ್ಯ ಬಿಕರಿಯಾಗುವ ಸನ್ನಿವೇಶ ಸೃಷ್ಟಿಯಾಗಿದೆ ಇದೊಂದು ಮನೆಹಾಳ ಸರ್ಕಾರ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.