ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ದೇಬಿಹಾಳ | 'ಪ್ರಭಾರಿ ಮುಖ್ಯಶಿಕ್ಷಕನ ಅಮಾನತಿಗೆ ಆಗ್ರಹ'

Published 15 ಮೇ 2024, 14:21 IST
Last Updated 15 ಮೇ 2024, 14:21 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ತಾಲ್ಲೂಕಿನ ಗುಡಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೇಮರಡ್ಡಿ ಮಲ್ಲಮ್ಮ ಹಾಗೂ ಬಸವಣ್ಣರ ಜಯಂತಿ ಆಚರಣೆ ಮಾಡದ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸಂಗಮೇಶ ಶಾಂತಪ್ಪ ನವಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಬಿಇಒ, ಶಿಕ್ಷಣ ಇಲಾಖೆ ಆಯುಕ್ತರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಬುಧವಾರ ಪ್ರತ್ಯೇಕವಾಗಿ ಲಿಖಿತ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರಭಾರಿ ಮುಖ್ಯಗುರು ಸಂಗಮೇಶ ನವಲಿ ಅವರು ಮುದ್ದೇಬಿಹಾಳದಲ್ಲಿ ನೋಂದಾಯಿತ ಖಾಸಗಿ ಶಿಕ್ಷಣ ಸಂಸ್ಥೆಯನ್ನು ಹೊಂದಿದ್ದಾರೆ. ಅದರ ಬಗ್ಗೆ ಕಾಳಜಿ ಹೆಚ್ಚು ತೋರುತ್ತಿದ್ದು, ತಾವು ಕೆಲಸ ಮಾಡುತ್ತಿರುವ ಸರ್ಕಾರಿ ಶಾಲೆಯನ್ನು ನಿರ್ಲಕ್ಷಿಸುತ್ತಿದ್ದಾರೆ. ಇದರಿಂದಾಗಿ ಗ್ರಾಮದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವುದು ಕಷ್ಟವಾಗಿದೆ. ಕೂಡಲೇ ಇವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲೆಗೆ ಒಳ್ಳೆಯ ಶಿಕ್ಷಕರನ್ನು ನಿಯೋಜನೆ ಮಾಡಬೇಕು. ಇಲ್ಲದಿದ್ದಲ್ಲಿ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು ಬಿಇಒ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮನವಿಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT