ವಿಜಯಪುರ: ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಡಿ ಸೇರಿಸುವ, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸರ್ಕಾರಿ ಎಂಜಿನಿಯರ್ ಕಾಲೇಜು ಸ್ಥಾಪಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಬೇಕೆಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ವಿಜಯಪುರ ಜಿಲ್ಲೆಯೂ ಕಲ್ಯಾಣ ಚಾಲುಕ್ಯರ ಕಾಲದಿಂದ ಹೈದ್ರಾಬಾದ ನಿಜಾಮನ ಆಡಳಿತ ಸೇರಿದಂತೆ ಇಂದಿನವರೆಗೂ ಕಲ್ಯಾಣ ಕರ್ನಾಟಕದ ಭಾಗವಾಗಿಯೇ ಇದೆ. ಇದಕ್ಕೆ ಸಾಕಷ್ಟು ಐತಿಹಾಸಿಕ ದಾಖಲಿಳಿವೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371ಜೆ ಮೀಸಲಾತಿ ನೀಡುವಾಗ ದುರುದ್ದೇಶಪೂರಿತ ರಾಜಕೀಯ ಮಾಡಿ ಜಿಲ್ಲೆಯನ್ನು ಮೀಸಲಾತಿಯಿಂದ ಕೈಬಿಟ್ಟಿದ್ದಕ್ಕೆ ಕಳೆದ 11 ವರ್ಷಗಳಲ್ಲಿ ಸಾಕಷ್ಟು ಅನ್ಯಾಯವಾಗಿದೆ.

ಜಿಲ್ಲೆಯ ಮಕ್ಕಳಿಗೆ ಸಿಗಬೇಕಾಗಿದ್ದ ಶೈಕ್ಷಣಿಕ ಮೀಸಲಾತಿ ಹಾಗೂ ಯುವ ಜನಾಂಗ ಔದ್ಯೋಗಿಕ ಮೀಸಲಾತಿಯಿಂದ ವಂಚನೆಗೊಳಗಾಗಿದ್ದಾರೆ. ಕೂಡಲೇ ಸರ್ಕಾರ ವಿಜಯಪುರ ಜಿಲ್ಲೆಯನ್ನು 371 ಜೆ ಮೀಸಲಾತಿಯಡಿ ಸೇರಿಸಿ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕಿಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು ನೀಡುವಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿರುವುದರಿಂದ ಜಿಲ್ಲೆಯ ಬಡ ಜನತೆಗೆ ಅನ್ಯಾಯವಾಗಿದೆ. ಕೂಡಲೇ ಸರ್ಕಾರ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಂಡು ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.