ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ಕನ್ನಡ ನಾಮಫಲಕ ಅಳವಡಿಸಲು ಆಗ್ರಹ

Published 26 ಜೂನ್ 2024, 15:39 IST
Last Updated 26 ಜೂನ್ 2024, 15:39 IST
ಅಕ್ಷರ ಗಾತ್ರ

ವಿಜಯಪುರ: ನಗರದ ಎಲ್ಲ ಅಂಗಡಿ, ಮಳಿಗೆಗಳು ಹಾಗೂ ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳಿಗೆ ಕನ್ನಡ ನಾಮ ಫಲಕವನ್ನು ಅಳವಡಿಸುಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮಹಾನಗರ ಪಾಲಿಕೆ ಆಯುಕ್ತ ಬಿ.ಎ.ಸೌದಾಗರ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ಕನ್ನಡ ನಾಮ ಫಲಕ ಕಡ್ಡಾಯದ ಕುರಿತು ಕರವೇ ರಾಜ್ಯಾ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡ ನಾಮಫಲಕಗಳ ಅಳವಡಿಸುವಂತೆ ಆದೇಶಿಸಿದೆ. ನಗರದ ಎಲ್ಲ ಅಂಗಡಿ ಮುಂಗಟ್ಟುಗಳು ಹಾಗೂ ಶಾಲಾ-ಕಾಲೇಜುಗಳು ಮಹಲುಗಳು ಸರ್ಕಾರಿ ಕಚೇರಿಗಳು 10 ದಿನಗಳಲ್ಲಿ ಕನ್ನಡ ನಾಮ ಫಲಕ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು. ಇಲ್ಲದೆ ಹೋದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬ್ರಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಆಗ್ರಹಿಸಿದರು.

ಕರವೇ ಪ್ರಮುಖರಾದ ರವಿ ಗೊಳಸಂಗಿ, ರಾವತ ಬರಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT