ಶನಿವಾರ, ಮೇ 15, 2021
25 °C

ಕೂಲಿ ಕಾರ್ಮಿಕರಿಗೆ ನೆರವು ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್ ಲಾಕ್‌ಡೌನ್‌ ಪರಿಣಾಮ ಬಡವರು, ಕೂಲಿ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದು, ಸರ್ಕಾರ ನೆರವಿಗೆ ಬರಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಆಗ್ರಹಿಸಿದ್ದಾರೆ.

ಹಣವಿಲ್ಲದ ಪರಿಣಾಮ ಆಕ್ಸಿಜನ್ ಮತ್ತು ಔಷಧ ಸಿಗಲಾರದೆ ಸಾಯುತ್ತಿದ್ದಾರೆ. ಕೊವಿಡ್‍ದಿಂದ ಮರಣ ಹೊಂದಿದ ಕಾರ್ಮಿಕರಿಗೆ ಸರ್ಕಾರ ₹5 ಲಕ್ಷ ಪರಿಹಾರ ಹಣವನ್ನು ನೀಡಬೇಕು ಹಾಗೂ ಉಚಿತವಾಗಿ 10 ಕೆ.ಜಿ ಅಕ್ಕಿ, 3 ಕೆ.ಜಿ ಜೋಳ, 2 ಕೆ.ಜಿ ಗೋಧಿ ಕೂಡಲೇ ವಿತರಿಸಬೇಕು ಎಂದು ಆಗ್ರಹಿಸಿದರು.

ಗುಳೆ ಹೋದ ಕೂಲಿಕಾರ್ಮಿಕರಿಗೆ ತಮ್ಮ ಜಿಲ್ಲೆ ಮತ್ತು ಹಳ್ಳಿಗಳಿಗೆ ಹೋಗಲು ಸರಿಯಾದ ವ್ಯವಸ್ಥೆ ಮಾಡಬೇಕು ಎಂದರು.

ಕೇಂದ್ರ ಸರ್ಕಾರ ಬೆಲೆ ಏರಿಕೆಯಿಂದ ತತ್ತರಿಸಿದ ಕಾರ್ಮಿಕರಿಗೆ ₹ 21 ಸಾವಿರ ವೇತನ ನೀಡಬೇಕು. ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ವರ್ಗಾವಣೆ ಮಾಡಿದ್ದನ್ನು ರದ್ದು ಪಡಿಸಿ 6ನೇ ವೇತನ ಜಾರಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು