ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಾಳಿಕೋಟೆ: ರೇಣುಕಸ್ವಾಮಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯ

Published 15 ಜೂನ್ 2024, 15:48 IST
Last Updated 15 ಜೂನ್ 2024, 15:48 IST
ಅಕ್ಷರ ಗಾತ್ರ

ತಾಳಿಕೋಟೆ: ಚಿತ್ರಮರ್ಗದ ರೇಣುಕಸ್ವಾಮಿ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘವು ತಹಶೀಲ್ದಾರ್‌ಗೆ ಶನಿವಾರ ಮನವಿ ಸಲ್ಲಿಸಿತು.

ಈ ಕ್ರೂರ ಕೆಲಸದಲ್ಲಿ ಭಾಗಿಯಾದವರ ವಿರುದ್ಧ ಪ್ರಮಾಣಿಕವಾಗಿ ಕಾನೂನು ರೀತಿ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿರುವ ಅವರು, ಪ್ರಕರಣವನ್ನು ಬೇಧಿಸಿರುವ ಪೋಲಿಸ್ ಇಲಾಖೆಗೆ ಅಭಿನಂದೆಗಳನ್ನು ಸಲ್ಲಿಸುತ್ತಿರುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕು ಬೇಡ ಜಂಗಮ ಸಮಾಜದ ಅಧ್ಯಕ್ಷ ಶರಣಯ್ಯ ಹಿರೇಮಠ, ಉಪಾಧ್ಯಕ್ಷ ಶಿವಲಿಂಗಯ್ಯ ಹಿರೇಮಠ, ಶಿವಶಂಕರಯ್ಯ ಹಿರೇಮಠ, ಗೌರವಾಧ್ಯಕ್ಷ ರಾಮಲಿಂಗಯ್ಯ ಹಿರೇಮಠ ಗಜದಂಡಯ್ಯಸ್ವಾಮಿ ಹಿರೇಮಠ, ಕಾಶಿನಾಥ ಹಿರೇಮಠ, ಮಲ್ಲಿಕಾರ್ಜುನ ಹಿರೇಮಠ, ಶ್ರೀಶೈಲ ಹಿರೇಮಠ, ಈರಯ್ಯ ಹಿರೇಮಠ, ನಾಗಭೂಷಣ ಡೊಣೂರಮಠ, ಪ್ರಕಾಶ ಹಿರೇಮಠ, ಗುರಯ್ಯ ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT