ವಿಜಯಪುರ: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘ ಆಗ್ರಹಿಸಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಎಸ್.ಅರಕೇರಿ, ರಾಜ್ಯದಲ್ಲಿ ಗಾಣಿಗ ಸಮಾಜದ ಸುಮಾರು 50 ಲಕ್ಷ ಜನಸಂಖ್ಯೆ ಇದೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡದೇಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಲಕ್ಷ್ಮಣ ಸವದಿ ಅವರು ಉಪ ಮುಖ್ಯಮಂತ್ರಿಯಾಗಿ, ಸಾರಿಗೆ ಸಚಿವರಾಗಿ ಸಾಕಷ್ಟ ಉತ್ತಮ ಕೆಲಸ ಮಾಡಿದ್ದರೂ ಸಂಪುಟದಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದರು.

ಪಕ್ಷದ ನಿಷ್ಠಾವಂತ, ಪ್ರಾಮಾಣಿಕ ಮುಖಂಡರಾಗಿರುವ ಸವದಿ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜದ ಮುಖಂಡರಾದ ಬಿ.ಪಿ.ಸರನಾಡಗೌಡ, ಎಂ.ಡಿ.ಹೆಬ್ಬಿ, ಎಸ್.ಜಿ.ಪಾಟೀಲ, ಮಲ್ಲಿಕಾರ್ಜುನ ಲೋಣಿ, ಶ್ರೀಕಾಂತ ಶಿರಡೋಣ, ಬಸವರಾಜ ಶಿರಶ್ಯಾಡ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.