ದೇವರಹಿಪ್ಪರಗಿ: ಪಟ್ಟಣದ ಬಸವೇಶ್ವರ ವೃತ್ತ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬಸವೇಶ್ವರ ಚಿತ್ರಕ್ಕೆ ಪೂಜೆ ಸಲ್ಲಿಸಿ ಬಸವ ಜಯಂತಿ ಆಚರಿಸಲಾಯಿತು.

ಪಟ್ಟಣದ ಬಸವೇಶ್ವರ ವೃತ್ತ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತದಿಂದ ಬಸವ ಜಯಂತಿ ಅಂಗವಾಗಿ ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ ಬಸವಣ್ಣ ಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿ, ಸಾಮಾಜಿಕ ಸಮಾನತೆ, ಭಾತೃತ್ವ, ಸಾಮರಸ್ಯದ ಕುರಿತಾದ ಚಿಂತನೆಗಳನ್ನು ತಮ್ಮ ವಚನಗಳ ಮೂಲಕ ಸಾದರ ಪಡಿಸಿದ ಬಸವಣ್ಣ 12ನೇ ಶತಮಾನದ ಕ್ರಾಂತಿಯೋಗಿಯೇನಿಸಿದ್ದಾರೆ. ಇಂದಿಗೂ ಬಸವಣ್ಣನವರು ಪ್ರತಿಪಾದಿಸಿದ ಶರಣ, ವಚನ ಸಂಸ್ಕೃತಿಗಳು ಇಡೀ ವಿಶ್ವಕ್ಕೆ ನೀಡಿದ ಆದರ್ಶ ಕೊಡುಗೆಗಳಾಗಿವೆ ಎಂದರು.

ನಿವೃತ್ತ ಶಿಕ್ಷಕ ಶಾಂತಪ್ಪ ಪಡನೂರ, ಜೆ.ಆರ್.ಬಿರಾದಾರ, ಶಿವಶರಣ ಪೂಜಾರಿ, ಪಿ.ಸಿ.ತಳಕೇರಿ, ಗೋಲ್ಲಾಳ ಬಿರಾದಾರ, ಪಿ.ಎಸ್.ಮಿಂಚನಾಳ, ಸಂಗನಗೌಡ ಪಾಟೀಲ, ಸೋಮು ದೇವೂರ, ಶಿವನಗೌಡ ಪಾಟೀಲ (ಯರನಾಳ) ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-26-245057517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.