ದೇವರಹಿಪ್ಪರಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕೂಡಲೇ ಉದ್ಘಾಟನೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘ ಪದಾಧಿಕಾರಿಗಳು ತಹಶೀಲ್ದಾರ್ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ ಬುಧವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘದ ಪದಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಕುರಿತು ತಹಶೀಲ್ದಾರ್ ಗಮನ ಸೆಳೆದರು.

ರಾಜ್ಯ ರೈತ ಸಂಘದ ಯುವ ಸಂಚಾಲಕ ಸಿದ್ಧನಗೌಡ ಪಾಟೀಲ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಪೂರ್ಣಗೊಂಡು 6 ತಿಂಗಳಾದರೂ ಶಾಸಕರಾಗಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗೆ ಕ್ರಮ ವಹಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಅದಾಗ್ಯೂ ಯಾವುದೇ ನಿರ್ಧಾರವಾಗಿಲ್ಲ. ಹೀಗೆ ಉದ್ಘಾಟನೆಗೆ ವಿಳಂಬ ಮಾಡಿದ್ದಲ್ಲಿ ಏ.30ರಿಂದ ತಹಶೀಲ್ದಾರ್ ಕಾರ್ಯಾಲಯದ ಎದುರು ಸಂಘಟನೆಗಳಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.

ನಮ್ಮ ಕರ್ನಾಟಕ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್, ಅವೋಗೇಶ್ವರಶ್ರೀ, ಹಮೀದ್ ಮುಲ್ಲಾ, ಶಂಕರಗೌಡ ಹಿರೇಗೌಡರ, ಚಿದಾನಂದ ಬಜಂತ್ರಿ, ದಾವಲ್ಸಾಬ್ ಹೆಬ್ಬಾಳ, ಸಂಗನಗೌಡ ಬಿರಾದಾರ, ಮಲ್ಲಿಕಾರ್ಜುನ ಭಜಂತ್ರಿ, ದಾದಾ ಬೇಪಾರಿ, ಅಬೂಬಕರ್ ಯಲಗಾರ, ಮಲ್ಲು ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-743712708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.