ಪ್ರಜಾವಾಣಿವಾರ್ತೆ

ದೇವರಹಿಪ್ಪರಗಿ: ‘ಸಂವಿಧಾನಕ್ಕೆ ಚ್ಯುತಿ ತರುವಂತ ಕಾರ್ಯವನ್ನು ನಾಗರಿಕ ಸಮಾಜ ಎಂದಿಗೂ ಒಪ್ಪುವದಿಲ್ಲ. ಸಂವಿಧಾನವನ್ನು ಎಲ್ಲರೂ ಅರಿಯುವುದು ಅಗತ್ಯ’ ಎಂದು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ಪ್ರೌಢಶಾಲಾ ಆವರಣದಲ್ಲಿ ನಡೆದ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ಡಿಎಸ್ಎಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಮಾತನಾಡಿ, ‘ಸಂವಿಧಾನ ಪೀಠಿಕೆ ಅರಿತಾಗ ಮಾತ್ರ ಸಾಮಾಜಿಕ ನ್ಯಾಯದ ಮಹತ್ವ ತಿಳಿಯಬಹುದು. ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಅಭಿವೃದ್ಧಿಗಾಗಿ ಇಂಥ ಜಾಗೃತಿ ಸಮಾವೇಶಗಳು ಅಗತ್ಯವಾಗಿವೆ’ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಮಾತನಾಡಿ, ‘ದೇಶದಲ್ಲಿ ಎಲ್ಲರೂ ಸಮನಾಗಿ ಬಾಳುವಂತಾಗಬೇಕು, ಆಗ ಮಾತ್ರ ಸಂವಿಧಾನ ರಚನೆಯ ಮುಖ್ಯ ಉದ್ದೇಶ ಈಡೇರಿದಂತಾಗುತ್ತದೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಮಾತನಾಡಿ, ‘ಸಂವಿಧಾನವನ್ನು ಸನಾತನವಾದಿಗಳು ಹಿಮ್ಮೆಟ್ಟಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ ಇದನ್ನು ಅರಿತು ಜಾಗೃತಿ ಮೂಡಿಸುವ ಕಾರ್ಯ ಅತ್ಯಂತ ಶ್ಲಾಘನೀಯ ’ಎಂದರು.

ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಮಾತನಾಡಿದರು.

ಡಿಎಸ್ಎಫ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಪ್ರಾಸ್ತಾವಿಕ ಮಾತನಾಡಿ, ‘ಸಂವಿಧಾನದ ಮೂಲ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಸಮಾವೇಶ ಕೈಗೊಳ್ಳಲಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿ ಅಂಬೇಡ್ಕರ್ ಚಿತ್ರದ ಮೆರವಣಿಗೆ ನಡೆಯಿತು. ನಂತರ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ಸಿದ್ಧಾರ್ಥ ರೂಗಿ ಸೇರಿದಂತೆ ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, ಸಂಗಮೇಶ ಛಾಯಾಗೋಳ, ಬಶೀರ್ ಅಹ್ಮದ್ ಬೇಪಾತಿ, ಸಿ.ಕೆ.ಕುದರಿ, ಕೆ.ಆರ್.ಕೊಕಟನೂರ, ಕಾಶೀನಾಥ ತಳಕೇರಿ, ಅರುಣ ಕೋರವಾರ, ಜಾನು ಗುಡಿಮನಿ, ಶರಣು ನಾಟೀಕಾರ, ಸೇರಿದಂತೆ ಪಟ್ಟಣದ ಪ್ರಮುಖರು ಹಾಗೂ ತಾಲ್ಲೂಕು ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-26-1578654072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.