ದೇವರಹಿಪ್ಪರಗಿ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುರಿತ ಕಾಯಂ ವೈದ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್ ಮಾತನಾಡಿ, ‘ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾದ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಆರಂಭಿಸಿಲ್ಲ. ಜೊತೆಗೆ ಈಗ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನುರಿತ ಕಾಯಂ ವೈದ್ಯರಿಲ್ಲ ಹೀಗಾದರೆ ಬಡಜನತೆಯ ಪಾಡೇನು? ಪಿಎಚ್ಸಿಗೆ ನೇಮಕಗೊಂಡು ಬರುವ ವೈದ್ಯರು 6 ತಿಂಗಳಲ್ಲಿ ಬೇರೆಡೆ ತೆರಳುತ್ತಾರೆ. ಕೂಡಲೇ ಕಾಯಂ ವೈದ್ಯರನ್ನು ನೇಮಕ ಮಾಡಬೇಕು. ಇಲ್ಲವಾದರೇ ಎಪ್ರಿಲ್ 1ರಿಂದ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಚಿದಾನಂದ ಬಜಂತ್ರಿ, ಅಬೂಬಕರ್ ಯಲಗಾರ, ಮಲ್ಲಿಕಾರ್ಜುನ ಬಜಂತ್ರಿ ಹಾಗೂ ಸೇನೆಯ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-26-1080970203

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.