ದೇವರಹಿಪ್ಪರಗಿ: ಇಲ್ಲಿನ ಸರ್ಕಾರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಗೆ ಸಿಂದಗಿ ಕ್ಷೇತ್ರ ಶಿಕ್ಷಣಾಕಾರಿ ಮಹಾಂತೇಶ ಯಡ್ರಾಮಿ ಸೋಮವಾರ ಭೇಟಿ ನೀಡಿ, ಅಲ್ಲಿನ ಸಮಸ್ಯೆ ಕುರಿತು ಪರಿಶೀಲಿಸಿದರು.

ಮುಖ್ಯಶಿಕ್ಷಕಿ ಮಹಾನಂದಾ ಕುಂಬಾರ ಆವರಣದಲ್ಲಿ ಸಂಗ್ರಹವಾಗುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ನೀಡಿ, 'ಏಳೆಂಟು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ವತಿಯಿಂದ ಚರಂಡಿ, ಸಿಸಿ ರಸ್ತೆ ನಿರ್ಮಿಸುವಾಗ ಶಾಲಾ ಆವರಣಕ್ಕಿಂತ ಎತ್ತರದಲ್ಲಿ ಚರಂಡಿ ನಿರ್ಮಿಸಿದ್ದರಿಂದ ಶಾಲೆಯ ಆವರಣಕ್ಕೆ ನೀರು ಹರಿದು ಬರುತ್ತದೆ. ಈ ಬಗ್ಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿಯವರು ನೀರು ನಿಲ್ಲುವ ಜಾಗಕ್ಕೆ ತಾತ್ಕಾಲಿಕವಾಗಿ ಗರಸು ಹಾಕಿಸಿದ್ದಾರೆ’ ಎಂದು ತಿಳಿಸಿದರು.

ಸಹಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರನ್ನೊಳಗೊಂಡು ತಕ್ಷಣ ಸಭೆ ಕರೆದು, ಆವರಣದ ಒಂದು ಮೂಲೆಯಲ್ಲಿ ಜೆಸಿಬಿ ಮೂಲಕ ಗುಂಡಿ ತೋಡಿಸಿ, ಕಲ್ಲು ಮಣ್ಣು ತುಂಬಿಸಿ, ನೀರು ಇಂಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾಗಿ ತಿಳಿಸಿದರು.

'ಶಾಲಾ ಆವರಣ ಜಲಾವೃತ; ಮಕ್ಕಳ ಪರದಾಟ' ಶೀರ್ಷಿಕೆಯಡಿ ‘ಪ್ರಜಾವಾಣಿ’ ಜುಲೈ 20ರ ಸಂಚಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಈ ವರದಿ ಗಮನಿಸಿದ ಕ್ಷೇತ್ರ ಶಿಕ್ಷಣಾಕಾರಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.