ಸಿಂದಗಿ: ಪಟ್ಟಣವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳನ್ನು ಅಭಿವೃದ್ದಿ ಪಡಿಸಿ ಸಿಂದಗಿಯನ್ನು ಸುಂದರ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಪಟ್ಟಣದ ಶರಣು ಶ್ರೀಗಿರಿ ಅವರ ಮನೆಯಿಂದ ಡಾ. ಕಾಗಿ ಅವರ ಮನೆಯವರೆಗೆ ಅಂದಾಜು ₹ 20 ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಗರ ಅಭಿವೃದ್ದಿಯಾಗಲು ಮೊದಲು ರಸ್ತೆಗಳು ಉತ್ತಮವಾಗಿರಬೇಕು. ಮುಂಬರುವ ದಿನಗಳಲ್ಲಿ ಸಿಂದಗಿಗೆ ಪಟ್ಟಣದ ಎಲ್ಲ ವಾರ್ಡ್‌ಗಳ ರಸ್ತೆಗಳನ್ನು ಹಾಗೂ ಮುಖ್ಯ ರಸ್ತೆಗಳನ್ನು ಅಭಿವೃದ್ದಿ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.

ಪುರಸಭೆಯ ಅಧ್ಯಕ್ಷ ಶಾಂತವೀರ ಬಿರಾದಾರ, ಸದಸ್ಯರಾದ ಹಸೀಂ ಆಳಂದ, ರಾಜು ಖೇಡ್, ಸೈಫನ್ ನಾಟಿಕಾರ್, ಮಾಜಿ ಸದಸ್ಯರಾದ ಇಕ್ಬಾಲ್ ತಲಕಾರಿ, ರಹೀಂ ಮರ್ತುರ, ಮೈಬುಬ್ ಮರ್ತುರ್, ಕಾಂಗ್ರೆಸ್ ಮುಖಂಡರಾದ ಅಶೋಕ್ ವಾರದ, ಶರಣು ಶ್ರೀಗಿರಿ, ರಾಜಶೇಖರ ಸಂಗಮ್, ಗುರು ತಾರಾಪುರ, ಶಿವಾನಂದ ಅರಲಗುಂದಗಿ, ಮುತ್ತು ಅರಳಗುಂಡಗಿ, ವಿರೇಶ್ ವಸ್ತ್ರದ, ಶಾಂತಪ್ಪ ರಾಣಾಗೋಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.