ಹೂವಿನಹಿಪ್ಪರಗಿ: ಸರ್ಕಾರಿ ಹಾಸ್ಟೆಲ್ಗಳಲ್ಲಿನ ಬಡ ಮಕ್ಕಳಿಗೆ ಭವಿಷ್ಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮತಕ್ಷೇತ್ರದಲ್ಲಿ ನಾನು ಚಾಲನೆ ನೀಡಿರುವ ಪ್ರತಿ ವಸತಿ ಶಾಲೆಗಳಲ್ಲಿ ಸುಸಜ್ಜಿತ ಗ್ರಂಥಾಲಯ ಸ್ಥಾಪಿಸಿ ಪುಸ್ತಕಗಳನ್ನು ಒದಗಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ತಿಳಿಸಿದರು.

ತಾಲ್ಲೂಕಿನ ಹೂವಿನಹಿಪ್ಪರಗಿ ಗ್ರಾಮದಲ್ಲಿ ಶನಿವಾರ ನೂತನವಾಗಿ ನಿರ್ಮಿಸಲಾದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಶಾಸಕರಾಗಿದ್ದ ಸೋಮನಗೌಡರು ಈ ಹಾಸ್ಟೆಲ್ ಕಟ್ಟಡಕ್ಕಾಗಿ ಅಡಿಗಲ್ಲು ಹಾಕಿದ್ದರು, ಇಂದು ನಾನು ಕಟ್ಟಡ ಉದ್ಘಾಟಿಸುತ್ತಿದ್ದೇನೆ. ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಸ್ವಂತ ಕಟ್ಟಡಕ್ಕಾಗಿ ಅಧಿಕಾರಿಗಳು ಜಾಗ ಗುರುತಿಸಿ ಕೊಟ್ಟರೆ ಶೀಘ್ರ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಭೂಮಿಪೂಜೆ: ಹೂವಿನಹಿಪ್ಪರಗಿ ಗ್ರಾಮದಲ್ಲಿ ₹2 ಕೋಟಿ ಮೊತ್ತದಲ್ಲಿ ಪ್ರವಾಸಿ ಮಂದಿರ ನಿರ್ಮಾಣ, ₹2.75 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ₹10 ಲಕ್ಷ ವೆಚ್ಚದಲ್ಲಿ ಈದ್ಗಾ ಅಭಿವೃದ್ಧಿ ಕಾಮಗಾರಿ ಮತ್ತು ಬ್ಯಾಕೋಡ ಗ್ರಾಮದಲ್ಲಿ ತಲಾ ₹5 ಲಕ್ಷ ವೆಚ್ಚದಲ್ಲಿ ಗೌರಿ ದೇವಸ್ಥಾನದ ಹತ್ತಿರ, ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನಗಳ ನಿರ್ಮಾಣ ಹಾಗೂ ₹50 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳು ಸೇರಿ ಒಟ್ಟು ₹2.72 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ತಾ.ಪಂ ಇಓ ವೆಂಕಟೇಶ ವಂದಾಲ, ಉಪ ತಹಶೀಲ್ದಾರ್ ಸೋಮಶೇಖರ ತಾವರಖೇಡ, ಆಡಳಿತಾಧಿಕಾರಿ ವಿ.ಬಿ.ಗೊಂಗಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಕಲ್ಯಾಣಾಧಿಕಾರಿ ಎಸ್.ವಿ. ನಿಂಬಾಳ, ತಾಲ್ಲೂಕು ವಿಸ್ತರಣಾಧಿಕಾರಿ ಸಿ.ಜಿ. ಬಿರಾದಾರ, ಪಿಡಬ್ಲೂಡಿ ಎಇಇ ಸಿದ್ದರಾಜ ದೊಡ್ಡಮನಿ, ಕ್ರೈಸ್ ಎಇ ಬಸವರಾಜ, ಮುಖಂಡರಾದ ಚಂದ್ರಶೇಖರಗೌಡ ಪಾಟೀಲ, ಶಿವಾನಂದ ತಾಳಿಕೋಟಿ, ಸಿದ್ದು ಹಾದಿಮನಿ, ಪ್ರಕಾಶ ತೋಟದ, ಅಬ್ಬಾಸಲಿ ಚಪ್ಪರಬಂದ ಹಾಗೂ ಬಿಸಿಎಂ ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.