ಮಂಗಳವಾರ, ಜನವರಿ 25, 2022
28 °C

ಧೂಳಖೇಡ ಚೆಕ್‌ಪೋಸ್ಟ್‌: ಎಸ್‌ಪಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನೆರೆಯ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಯ ಧೂಳಖೇಡ ಚೆಕ್‌ ಪೋಸ್ಟ್‌ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್‌ ಮೂರನೇ ಅಲೆ ನಿಯಂತ್ರಣಕ್ಕೆ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಎಸ್‌ಪಿ ಖುದ್ದಿ ಪರಿಶೀಲಿಸಿದರು.

ಪ್ರತಿ ದಿನ ಸಂಚರಿಸುವ ಅಂತರರಾಜ್ಯ ವಾಹನಗಳನ್ನು ಮತ್ತು ಸಾರ್ವಜನಿಕರನ್ನು ಕಡ್ಡಾಯವಾಗಿ ಕೋವಿಡ್‌ ತಪಾಸಣೆಗೆ ಒಳಪಡಿಸಬೇಕು. ಕೋವಿಡ್‌ ಲಸಿಕೆ ಎರಡು ಡೋಸ್‌ ಪಡೆದುಕೊಂಡಿರುವವರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು  ಅಧಿಕಾರಿ,ಸಿಬ್ಬಂದಿಗೆ ಸೂಚಿಸಿದರು.

ಹೊರ ರಾಜ್ಯದಿಂದ ಜಿಲ್ಲೆಗೆ ಅನಧೀಕೃತವಾಗಿ ಪ್ರಯಾಣಿಕರು ಪ್ರವೇಶಿಸದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.