ವಿಜಯಪುರ: ‘2027ರ ಭಾರತೀಯ ಜನಗಣತಿ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಮನೆಪಟ್ಟಿ ಹಾಗೂ ಮನೆ ಗಣತಿ ಕಾರ್ಯ ಕೈಗೊಳ್ಳಲಾಗುತ್ತದೆ. 2026ರ ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿ ಅವಧಿ ನಿಗದಿಯಾಗಿದ್ದು, ಮೊದಲ ಬಾರಿಗೆ ಡಿಜಿಟಲ್ ವ್ಯವಸ್ಥೆ ಜಾರಿಗೆ ಬರುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದರು.

ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಗಣತಿ ಅಂಗವಾಗಿ ಜಿಲ್ಲಾ ಹಾಗೂ ಚಾರ್ಜ್ ಅಧಿಕಾರಿಗಳಿಗೆ ಆಯೋಜಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜನಗಣತಿಯನ್ನು ಸಮರ್ಪಕವಾಗಿ ನಡೆಸಲು ಪೂರ್ವ ಸಿದ್ಧತೆ ಅಗತ್ಯವಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು’ ಎಂದು ಸೂಚಿಸಿದರು.

‘2026ರ ಏಪ್ರಿಲ್ 16ರಿಂದ ಮೇ 16ರವರೆಗೆ ಮನೆಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ. 150ರಿಂದ 200 ಮನೆಗಳು ಅಥವಾ 700ರಿಂದ 800 ಜನಸಂಖ್ಯೆಗೆ ಒಬ್ಬ ಗಣತಿದಾರರನ್ನು ನೇಮಿಸಲಾಗುತ್ತದೆ. ಪ್ರತಿ ಆರು ಗಣತಿದಾರರಿಗೆ ಒಬ್ಬ ಮೇಲ್ವಿಚಾರಕ ಇರಲಿದ್ದಾರೆ. ಎರಡನೇ ಹಂತವಾಗಿ 2027ರ ಫೆಬ್ರವರಿಯಲ್ಲಿ ಜನಸಂಖ್ಯಾ ಗಣತಿ ನಡೆಯಲಿದೆ’ ಎಂದರು.

‘ಈ ಬಾರಿ ಜನಗಣತಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ನಡೆಯಲಿದೆ. ಗಣತಿದಾರರು ತಮ್ಮ ಸ್ಮಾರ್ಟ್ಫೋನ್ನಲ್ಲಿ ವಿಶೇಷ ಮೊಬೈಲ್ ಆ್ಯಪ್ ಮೂಲಕ 33 ಪ್ರಶ್ನೆಗಳ ಪ್ರಶ್ನಾವಳಿಯನ್ನು ಆಧರಿಸಿ ದತ್ತಾಂಶ ಸಂಗ್ರಹಿಸಲಿದ್ದಾರೆ. ಜನಗಣತಿ ಮೇಲ್ವಿಚಾರಣೆ ಮತ್ತು ನಿರ್ವಹಣೆಗೆ ಸಿಎಂಎಂಎಸ್ ಪೋರ್ಟಲ್ ಬಳಸಲಾಗುತ್ತದೆ. ಹೀಗಾಗಿ ತರಬೇತಿಯನ್ನು ಸಮರ್ಪಕವಾಗಿ ಪಡೆದು ನಿಖರ ಮಾಹಿತಿ ಸಂಗ್ರಹಿಸಬೇಕು’ ಎಂದು ಹೇಳಿದರು.

‘ಗ್ರಾಮೀಣ ಭಾಗದಲ್ಲಿ ತಹಶೀಲ್ದಾರರು ಹಾಗೂ ನಗರ ಪ್ರದೇಶಗಳಲ್ಲಿ ಮುಖ್ಯಾಧಿಕಾರಿಗಳು ಚಾರ್ಜ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರು ಪ್ರಧಾನ ಜನಗಣತಿ ಅಧಿಕಾರಿಗಳಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಜಿಲ್ಲಾ ಜನಗಣತಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ’ ಎಂದರು.

‘ಜನಗಣತಿ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ದಿಕ್ಸೂಚಿಯಾಗಿರುವುದರಿಂದ ಸಮಗ್ರ ಮತ್ತು ಶುದ್ಧ ದತ್ತಾಂಶ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ವಿಮೇಶ ಪಿ., ಭಾರತ ಸರ್ಕಾರದ ಸಹಾಯಕ ನಿರ್ದೇಶಕ ಬ್ರಿಜೇಶ್ ಎ. ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.