ಸಿಂದಗಿ: ಅಂಗವಿಕಲರು, ವಿಶೇಷ ಚೇತನರು, ತಮ್ಮ ವಿಕಲತೆ ಕುರಿತು ಕೀಳರಿಮೆ ಹೊಂದದೆ, ಎದೆಗುಂದದೆ, ಜೀವನದಲ್ಲಿ ಮುನ್ನಡೆಯಬೇಕು. ಸಾಧನೆ ಮಾಡಿ ಮುಖ್ಯವಾಹಿನಿಗೆ ಬರಬೇಕು’ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾಧವ ಹೇಳಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ವಿಶ್ವ ಅಂಗವಿಕಲರ ದಿನ ಹಾಗೂ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತು ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಇಒ ರಾಮೂ ಜಿ.ಅಗ್ನಿ ಅಧ್ಯಕ್ಷತೆ ವಹಿಸಿದ್ದರು. ಶಮಾ ಪಟೇಲ್ ಕಾಚೂರ ವಕೀಲ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ, ಅಪರ್ ಸರ್ಕಾರಿ ವಕೀಲ ಬಿ.ಜಿ.ನೆಲ್ಲಗಿ, ಸಹಾಯಕ ಸರ್ಕಾರಿ ಅಭಿಯೋಜಕಿ ಎಂ.ಎಸ್.ಗೊಳಸಂಗಿಮಠ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್.ಕೋರವಾರ, ಕರ್ನಾಟಕ ರಾಜ್ಯ ಅಂಗವಿಕಲ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷ ವಿಠ್ಠಲ ಕರ್ಜಗಿ, ತಾಲ್ಲೂಕು ಪಂಚಾಯ್ತಿ ಎಂ.ಆರ್.ಡಬ್ಲೂ ಮುತ್ತುರಾಜ ಸಾತಿಹಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.