ಆರಂಭದಲ್ಲಿ ‘ಪ್ರಜಾವಾಣಿ’ ಪತ್ರಿಕೆ ಏಜೆಂಟರಾಗಿ ಪತ್ರಿಕೆ ವಿತರಣೆ ಕಾರ್ಯದಲ್ಲಿ ತೊಡಗಿದ ಅವರು ಓದುಗರ ವಿಶ್ವಾಸ ಬೆಳೆಸಿಕೊಂಡರು. ಪತ್ರಿಕೆ ವಿತರಣೆ ಒಬ್ಬರಿಂದಲೇ ಸಾಧ್ಯವಾಗದೇ ಹೋದಾಗ ಕೆಲ ಯುವಕರಿಗೆ ಸಂಬಳ ನೀಡಿ ಪತ್ರಿಕೆ ವಿತರಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪತ್ರಿಕೆ ವಿತರಣೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಅವರು ವಿಜಯವಾಣಿ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ, ಉದಯವಾಣಿ, ಕನ್ನಡಪ್ರಭ ಸೇರಿದಂತೆ ವಿವಿಧ ಪತ್ರಿಕೆಗಳ ವಿತರಣೆಯಲ್ಲಿ ತೊಡಗಿಕೊಂಡಿದ್ದಾರೆ. ಓದುಗರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ 15ಕ್ಕೂ ಹೆಚ್ಚು ಜನರು ಪತ್ರಿಕೆಗಳ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆರ್ಥಿಕವಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವುದರೊಂದಿಗೆ ಕೆಲವರಿಗೆ ಉದ್ಯೋಗ ನೀಡಿದ ತೃಪ್ತಿ ಅವರದು.