ಸೋಲಾಪುರ: ರಾಜ್ಯ ಗ್ರಾಮೀಣ ಜೀವನೋನ್ನತಿ ಅಭಿಯಾನದ ಮೂಲಕ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 8695 ಮಹಿಳೆಯರ ಸ್ವಸಹಾಯ ಸಂಘಗಳಿಗೆ ವಿವಿಧ ಉದ್ಯೋಗಗಳಿಗಾಗಿ ₹418.95 ಕೋಟಿ ಸಾಲ ವಿತರಣೆ ಮಾಡಲಾಗಿದೆ.

ಪ್ರಸ್ತುತ ಆರ್ಥಿಕ ವರ್ಷದಲ್ಲಿ ಮಹಿಳೆಯರ ಸ್ವಸಹಾಯ ಸಂಘಗಳಿಗೆ ₹380 ಕೋಟಿ ಸಾಲ ನೀಡುವ ಗುರಿ ಹೊಂದಿತ್ತು. ಆದರೆ, 418.95 ಕೋಟಿ ಸಾಲ ವಿತರಿಸಿ ಶೇ.130.84 ರಷ್ಟು ಗುರಿ ಸಾಧಿಸಿದೆ. ಈ ಮೂಲಕ ರಾಜ್ಯದಲ್ಲಿ ಜಿಲ್ಲೆ ಗ್ರಾಮೀಣ ಅಭಿವೃದ್ಧಿ ವಿಷಯದಲ್ಲಿ ಮುನ್ನಡೆ ಸಾಧಿಸಿದೆ ಎಂದು ರಾಜ್ಯ ಗ್ರಾಮೀಣ ಜೀವನೋನ್ನತಿ ಜಿಲ್ಲಾ ಅಭಿಯಾನದ ಸಂಚಾಲಕ ಸಚಿನ್ ಚವರೆ ಹೇಳಿದರು.

ಮಹಾರಾಷ್ಟ್ರ ರಾಜ್ಯ ಗ್ರಾಮೀಣ ಜೀವನೋನ್ನತಿ ಅಭಿಯಾನದ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಬಡತನ ನಿರ್ಮೂಲನೆಗೆ ಪ್ರಯತ್ನ ಮಾಡಲಾಗುತ್ತಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಿ ಗ್ರಾಮೀಣ ಬಡ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸರ್ಕಾರದ ವತಿಯಿಂದ ಪ್ರಯತ್ನ ಮಾಡಲಾಗುತ್ತಿದೆ. ಈ ಉಪಕ್ರಮದ ಮೂಲಕ ಮಹಿಳೆಯರ ಸ್ವಸಹಾಯ ಗುಂಪುಗಳಲ್ಲಿ ಮಹಿಳೆಯರಿಗೆ ಸಬಲೀಕರಣ ಗೊಳಿಸಲು ವಿವಿಧ ಉದ್ಯೋಗ ಸ್ಥಾಪಿಸಲು ತರಬೇತಿಯೊಂದಿಗೆ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುವುದು.

ಜಿಲ್ಲೆಯಲ್ಲಿರುವ ಮಹಿಳಾ ಸ್ವಸಹಾಯ ಸಂಘಗಳು ಸಾಂಪ್ರದಾಯಿಕ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು. ಈ ಉದ್ದೇಶಕ್ಕಾಗಿ ಗ್ರಾಮೀಣ ಮಹಿಳಾ ಸ್ವ ಸಹಾಯ ಸಂಘಗಳಿಗೆ ಬೆಳೆಗಳಿಗೆ ಔಷಧ ಸಿಂಪಡಿಸುವ 7 ಡ್ರೋಣಗಳನ್ನು ನೀಡಲಾಗಿದೆ. ಮಹಿಳೆಯರಿಗೂ ಬಳಸುವ ಕುರಿತು ತರಬೇತಿ ನೀಡಲಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಬೇಕು. ಈ ಉದ್ದೇಶಕ್ಕಾಗಿ ನಗರದ ಪಾರ್ಕ್ ಚೌಕದಲ್ಲಿರುವ ನೆಹರು ವಸತಿ ಗ್ರಹದಲ್ಲಿ ಮಿನಿ ಶಾಪಿಂಗ್ ಮಾಲ್ ಹಾಗೂ ರೆಸ್ಟೋರೆಂಟ್ ನಿರ್ಮಾಣ ಹಂತದಲ್ಲಿದೆ ಎಂದು ಜಿಲ್ಲಾ ಪರಿಷತ್ ಕಾರ್ಯನಿರ್ವಹಣಾಧಿಕಾರಿ ಕುಲದೀಪ ಜಂಗಮ ತಿಳಿಸಿದರು.

ಪಂಢರಪುರ ತಾಲೂಕಿನ ತರಡಗಾಂವದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗಾಗಿ ಶೈತ್ಯಾಗಾರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಂಗಳವೇಡ ತಾಲೂಕಿನ ಬೋರಾಳೆ ಗ್ರಾಮದಲ್ಲಿ ರಾಗಿ ತರಬೇತಿ ಕೇಂದ್ರ ಆರಂಭಿಸುವ ಪ್ರಕ್ರಿಯೆ ನಡೆಯುತ್ತಿದೆ. ಸೋಲಾಪುರ ನಗರದಲ್ಲಿ ಪಾರ್ಕ್ ಚೌಕ್ ನಲ್ಲಿರುವ ನೆಹರು ವಸತಿ ಗ್ರಹದಲ್ಲಿ ಮಿನಿ ಶಾಪಿಂಗ್ ಮಾಲ್ ಹಾಗೂ ರೆಸ್ಟೋರೆಂಟ್ ಆರಂಭಿಸಲಾಗುತ್ತಿದೆ. ಇದಕ್ಕಾಗಿ ಜಿಲ್ಲಾ ಯೋಜನಾ ಸಮಿತಿಯಿಂದ ₹2 ಕೋಟಿ ನಿಧಿ ಮಂಜೂರಾತಿಗೆ ಅನುಮೋದನೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಮಹಿಳಾ ಸ್ವಸಹಾಯ ಸಂಘಗಳು ಸುಸ್ಥಿರ ಆರ್ಥಿಕ ಅಭಿವೃದ್ಧಿಯಾಗಬೇಕು. ಇದಕ್ಕಾಗಿ ಎಲ್ಲ ಪ್ರಯತ್ನಗಳು ಮಾಡಲಾಗುತ್ತಿದೆ ಎಂದು ಜಿಲ್ಲಾ ಗ್ರಾಮೀಣ ಅಭಿವೃದ್ಧಿ ವ್ಯವಸ್ಥೆಯ ಯೋಜನಾ ನಿರ್ದೇಶಕ ಸುಧೀರ ಠೋಂಬರೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.