ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಮಟ್ಟದ ಯುವಜನೋತ್ಸವ ಡಿ. 6 ಕ್ಕೆ

Last Updated 23 ನವೆಂಬರ್ 2022, 12:57 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಿಎಲ್‍ಡಿಇ ಫಾರ್ಮಸಿ ಮಹಾವಿದ್ಯಾಲಯಆಶ್ರಯದಲ್ಲಿ ಡಿಸೆಂಬರ್ 6 ರಂದು ನಗರದ ಫ.ಗು.ಹಳಕಟ್ಟಿ ಸ್ಮಾರಕ ಭವನದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ ಗುಂಪು ಸ್ಪರ್ಧೆಗಳು, ಏಕಾಂಕ ನಾಟಕ (ಕನ್ನಡ, ಇಂಗ್ಲೀಷ್ ಮತ್ತು ಹಿಂದಿ), ಶಾಸ್ತ್ರೀಯ ಗಾಯನ (ಕರ್ನಾಟಕ, ಹಿಂದೂಸ್ತಾನಿ), ಸಿತಾರ್, ಕೊಳಲು, ವೀಣೆ, ತಬಲಾ ಹಾಗೂ ಮೃದಂಗ ವೈಯಕ್ತಿಕ ಸ್ಪರ್ಧೆಗಳು ಮತ್ತು ಭರತನಾಟ್ಯ, ಓಡಿಸ್ಸಿ, ಮಣಿಪುರಿ, ಕೂಚುಪುಡಿ, ಕಥಕ್, ಹಾರ್ಮೋನಿಯಂ, ಗಿಟಾರ್ ಹಾಗೂ ಆಶು ಭಾಷಣ ಸ್ಪರ್ಧೆ (ಕನ್ನಡ, ಹಿಂದಿ ಅಥವಾ ಇಂಗ್ಲೀಷ್), ಶಾಸ್ತ್ರೀಯ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.

ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಸ್ಪರ್ಧಿಗಳು ಡಿ.3 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ವಿಜಯಪುರ ಇವರಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಭಾಗವಹಿಸುವ ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ, ಉಟೋಪಹಾರ ವ್ಯವಸ್ಥೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಅತ್ಯುತ್ತಮ ಕಲಾವಿದರನ್ನು ಆಯ್ಕೆ ಮಾಡಿ ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ನಿಯೋಜಿಸಲಾಗುವುದು.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: 08352-251085 ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT