ವಿಜಯಪುರ:ಕೌಟುಂಬಿಕ ಹಿಂಸೆಯಿಂದ ನೊಂದ ಮಹಿಳೆಯರಿಗೆ ಅಧಿಕಾರಿಗಳು ಆಪ್ತ ಸಮಾಲೋಚನೆ ನಡೆಸಿ, ಅಗತ್ಯವಾದ ಕಾನೂನು ಮತ್ತು ಇತರೆ ನೆರವು ನೀಡುವ ಮೂಲಕ ರಕ್ಷಣೆ ಒದಗಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಉಪನಿರ್ದೇಶಕಕೆ.ಕೆ.ಚವ್ಹಾಣ ಹೇಳಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ 2005 ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಪಾತ್ರ ಕುರಿತ ತರಬೇತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಡಿ ಕುಟುಂಬದ ಸದಸ್ಯರಿಗೆ ಆಪ್ತ ಸಮಾಲೋಚನೆ ನಡೆಸುವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಮಹಿಳೆಯ ದೌರ್ಜನ್ಯದ ಬಗ್ಗೆ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡು ತ್ವರಿತ ವಿಲೇವಾರಿ ಹಾಗೂ ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಪ್ರಧಾನ ಜಿಲ್ಲಾ ಹಾಗೂಸೆಷನ್ಸ್ ನ್ಯಾಯಾಧೀಶರು (ಪ್ರಭಾರ) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಅಧ್ಯಕ್ಷ ಸತೀಶ ಎಲ್.ಪಿ., ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಹಿರಿಯ ವಕೀಲ ಜೆ.ಎಂ.ಭೂಸಗೊಂಡ ಅವರು, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಸ್ವರೂಪ, ಕಾಯ್ದೆಯ ಅನುಷ್ಠಾನಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವಕೀಲ ರಾಹುಲ್ ನಾಯಕ ಅವರು, ಲಿಂಗ ತಾರತಮ್ಯ ಹಾಗೂ ಮಹಿಳೆಯರ ಮೇಲೆ ಅದರ ಪರಿಣಾಮದ ಕುರಿತು ಮಾತನಾಡಿದರು. ಸಂದೀಪ ಎಸ್.ನಾಡಗೌಡ ಅವರು ನ್ಯಾಯಾಲಯದ ಆದೇಶಗಳ ಅನುಷ್ಠಾನ ಕುರಿತು, ವಕೀಲ ಎಂ.ಎಂ.ಬೃಂಗಿಮಠ ಅವರು ಕಾನೂನಿನಡಿ ಮಹಿಳೆಯರಿಗೆ ಲಭ್ಯವಿರುವ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು.

ವಕೀಲ ಬಾಬು ಅವತಾಡೆ ಅವರು ಕಾಯ್ದೆಯಡಿ ಪೊಲೀಸರ ಮತ್ತು ವೈದ್ಯಾಧಿಕಾರಿಗಳ ಪಾತ್ರದ ಕುರಿತುಮಾಹಿತಿ ನೀಡಿದರು.ವಕೀಲ ಶಿವಕುಮಾರ ಎಸ್.ಪೂಜಾರ ಕಾಯ್ದೆ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಕುರಿತು ಮಾಹಿತಿ ನೀಡಿದರು.

ವಕೀಲ ಎಂ.ಸಿ.ಲೋಗಾಂವಿ ಅವರು ಕಾಯ್ದೆಯ ಅನುಷ್ಠಾನದಲ್ಲಿ ಸಂರಕ್ಷಣಾಧಿಕಾರಿಗಳ ಪಾತ್ರ ಮತ್ತು ಕೌಟುಂಬಿಕ ಘಟನಾ ವರದಿ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು. ವಕೀಲ ಆರ್.ಕೆ.ಪೂಜಾರ ಅವರು, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಸಮಾಲೋಚಕರಾದ ಭಾರತಿ ವಿ. ಪಾಟೀಲ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಜಿಲ್ಲಾ ನಿರೂಪಣಾಧಿಕಾರಿ ಗೀತಾ ಗುತ್ತರಗಿಮಠ ಇದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶವೆಂಕಣ್ಣ ಬಿ. ಹೊಸಮನಿ, ವಿಜಯಪುರ ಜಿಲ್ಲಾ ವಕೀಲರದ ಸಂಘದಅಧ್ಯಕ್ಷ ಈರಣ್ಣ ಚಾಗಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.