ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಜಾನನ ಮಂಡಳಿಗಳಿಗೆ ತಲಾ ₹ 5 ಸಾವಿರ ದೇಣಿಗೆ: ಬಿಜೆಪಿ ಶಾಸಕ ಯತ್ನಾಳ

Published 11 ಸೆಪ್ಟೆಂಬರ್ 2023, 16:26 IST
Last Updated 11 ಸೆಪ್ಟೆಂಬರ್ 2023, 16:26 IST
ಅಕ್ಷರ ಗಾತ್ರ

ವಿಜಯಪುರ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸುವ ಗಜಾನನ ಮಂಡಳಿಗಳಿಗೆ ಅವರವರ ಪೆಂಡಾಲ್ ಗಳಿಗೆ ಹೋಗಿ ₹5 ಸಾವಿರ ದೇಣಿಗೆ ಹಾಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಗಜಾನನ ಮಂಡಳಿಗಳ ಪದಾಧಿಕಾರಿಗಳು ತಮ್ಮ ಕೆಲಸ, ಕಾರ್ಯಗಳನ್ನು ಬಿಟ್ಟು ಗಣೇಶನ ದೇಣಿಗೆಗಾಗಿ ಶಾಸಕರ ಕಚೇರಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ನಿಮ್ಮ ನಿಮ್ಮ ಪೆಂಡಾಲ್ ಗಳಲ್ಲಿಯೇ ಬಂದು ನಮ್ಮ ಸ್ವಾಮಿ ವಿವೇಕಾನಂದ ಸೇನೆಯ ಪದಾಧಿಕಾರಿಗಳು ದೇಣಿಗೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸನಾತನ ವೇದಿಕೆ

ವಿಜಯಪುರದಲ್ಲಿ ಈ ಬಾರಿ ಸ್ವಾಮಿ ವಿವೇಕಾನಂದ ಸೇನೆಯಿಂದ ಆಚರಿಸುವ ಗಜಾನನ ಮಹಾಮಂಡಳದ ವೇದಿಕೆಗೆ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡಲಾಗುವುದು ಎಂದು ಸೇನೆಯ ಅಧ್ಯಕ್ಷ ರಾಘವ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT