ಭಾನುವಾರ, ಮೇ 9, 2021
27 °C

ಡಾ.ಮಹೇಂದ್ರ ಕಾಪಸೆ ನೂತನ ಡಿಎಚ್‌ಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಡಾ.ಮಹೇಂದ್ರ ಕಾಪಸೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ. ರಾಜಕುಮಾರ ಯರಗಲ್‌ ಅವರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾದ ಕಾರಣ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಆದೇಶದಲ್ಲಿ ತಿಳಿಸಲಾಗಿದೆ.

ಯರಗಲ್ಲ ಅವರ ಸ್ಥಾನಕ್ಕೆ ಜಿಲ್ಲೆಯವರೇ ಆದ ಮಹೇಂದ್ರ ಕಾಪಸೆ ಅವರನ್ನು ನಿಯೋಜಿಸಲಾಗಿದೆ. ಕೋವಿಡ್‌ ಪ್ರಥಮ ಅಲೆಯ ಸಂದರ್ಭದಲ್ಲಿ ಡಿಎಚ್‌ಒ ಆಗಿ ಉತ್ತಮ ಕಾರ್ಯ ನಿರ್ವಹಿಸಿದ್ದ ಕಾಪಸೆ ಅವರು ಮೂರು ತಿಂಗಳ ಹಿಂದಷ್ಟೇ ಕಲಬುರ್ಗಿಗೆ ವರ್ಗಾವಣೆಯಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು