ಸೋಮವಾರ, ಆಗಸ್ಟ್ 15, 2022
24 °C
ಕ್ರಿಯಾ ಯೋಜನೆ ರೂಪಿಸಲು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಸೂಚನೆ

ಮುದ್ದೇಬಿಹಾಳ, ತಾಳಿಕೋಟೆಗೆ ಪ್ರತಿದಿನ ಕುಡಿವ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಮುದ್ದೇಬಿಹಾಳ, ತಾಳಿಕೋಟೆ ಹಾಗೂ ನಾಲತವಾಡದಲ್ಲಿ ಪ್ರತಿದಿನ ಕುಡಿಯುವ ನೀರು ಪೂರೈಸಲು ಕ್ರಿಯಾ ಯೋಜನೆ ರೂಪಿಸಿ, ಮನೆ ಮನೆಗೆ ಕುಡಿಯುವ ನೀರು ಪೂರೈಸಲು ತ್ವರಿಗತಿಯ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುದ್ದೇಬಿಹಾಳ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ಸಭೆ ನಡೆಸಿದ ಅವರು, ಮುದ್ದೇಬಿಹಾಳ, ತಾಳಿಕೋಟೆ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ನಿರ್ವಹಿಸುವಂತೆ ತಿಳಿಸಿದರು.

ಕುಡಿಯುವ ನೀರು ಪೂರೈಕೆ ಕಾಮಗಾರಿಯಲ್ಲಿ 88 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಹಾಗೂ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪುರಸಭೆ ಹಸ್ತಾಂತರವಾಗಿರುವ ಲೇಔಟ್‌ಗಳಲ್ಲಿ ರಸ್ತೆ, ಒಳಚರಂಡಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಮಾಡಿಕೊಂಡಿರಬೇಕು. ಅಂತಹ ಲೇಔಟ್‍ಗಳು ಎನ್.ಎ ಆಗಿರಬೇಕು, ಮೂಲ ಸೌಲಭ್ಯಗಳಿಲ್ಲದ ಲೇಔಟ್‍ಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು ಎಂದರು.

ಪುರಸಭೆಯ ವ್ಯಾಪ್ತಿಯಲ್ಲಿ ಬರುವ 100 ಉದ್ಯಾನಗಳಲ್ಲಿ 40 ಉದ್ಯಾನಗಳು ಸುಸ್ಥಿತಿಯಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಉದ್ಯಾನಗಳು ಅತಿಕ್ರಮಣ ಮಾಡಿಕೊಂಡಿದ್ದು, ಅವುಗಳನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್‌ ಸೋಂಕು ಹೆಚ್ಚದಂತೆ ನಿಯಂತ್ರಿಸಲು ಕ್ವಾರಂಟೈನ್ ವಾಚ್ ಆಪ್ ಹಾಗೂ ಕಾಂಟೆಕ್ಟ್‌ ಟ್ರೇಸಿಂಗ್ ಅನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಶಿಕ್ಷಣ ಇಲಾಖೆಯ ಬಿ.ಇ.ಒ ಹಾಗೂ ಬಿ.ಆರ್.ಸಿ ಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಇದರಿಂದ ಕೋವಿಡ್‌ ನಿಯಂತ್ರಿಸಬಹುದಾಗಿದೆ ಎಂದು ಸೂಚಿಸಿದರು.

ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮುದ್ದೇಬಿಹಾಳ ತಹಶೀಲ್ದಾರ್‌ ಮಾಳಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.