ವಿಜಯಪುರ: ಶಾಲೆಗೆ ಮದ್ಯಪಾನ ಮಾಡಿ ಬರುತ್ತಿದ್ದ ಬಬಲೇಶ್ವರ ತಾಲ್ಲೂಕಿನ ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎ.ಸಿ.ನಾರಾಯಣಪುರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

‘ಶಾಲೆಗೆ ನಿತ್ಯ ಕುಡಿದು ಬರುತ್ತಾರೆ, ಪಾಠ, ಪ್ರವಚನ ಮಾಡುತ್ತಿಲ್ಲ’ ಎಂದು ಶಾಲೆಯ ಎಸ್ಡಿಎಂಸಿ ಹಾಗೂ ಗ್ರಾಮಸ್ಥರು ಆರೋಪಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕ ಎ.ಸಿ.ನಾರಾಯಣಪುರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮದ್ಯಪಾನ ಮಾಡಿ ಶಾಲೆಗೆ ಬರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.