ವಿಜಯಪುರ: ಕೋವಿಡ್-19 ವ್ಯಾಕ್ಸಿನೇಶನ್ ಡ್ರೈ-ರನ್ (ಪೂರ್ವಾಭ್ಯಾಸ)ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಇಲ್ಲಿನ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಾಲನೆ ನೀಡಿ, ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ ಜಿಲ್ಲೆಗೆ ಬಂದ ತಕ್ಷಣ ಅದನ್ನು ಪ್ರಥಮ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ಹಾಕುವ ಮುನ್ನ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೂರ್ವಾಭ್ಯಾಸ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಆಸ್ಪತ್ರೆ ವಿಜಯಪುರ, ಬಿಎಲ್ಡಿಇ ವೈದ್ಯಕೀಯ ಮಹಾವಿದ್ಯಾಲಯ ವಿಜಯಪುರ, ಬಸವನಬಾಗೇವಾಡಿ ತಾಲ್ಲೂಕು ಆಸ್ಪತ್ರೆ, ಮನಗೂಳಿ ಸಮುದಾಯ ಆರೋಗ್ಯ ಕೇಂದ್ರ, ಮನಗೂಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ವಿಜಯಪುರದ ದರ್ಗಾ ಬಳಿ ಇರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಹಾಕುವ ಪೂರ್ವಾಭ್ಯಾಸ ಹಮ್ಮಿಕೊಳ್ಳಲಾಗಿದೆ ಎಂದರು.

ಕೋವಿಡ್ ಲಸಿಕೆ ಬಂದ ಬಳಿಕ ಈಗಾಗಲೇ Co-Win ತಂತ್ರಾಂಶದಲ್ಲಿ ನೊಂದಣಿಯಾದ ಜಿಲ್ಲೆಯ 15.318 ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ವ್ಯಾಕ್ಸಿನ್ ಅನ್ನು ಜಿಲ್ಲೆಯ ಆಯ್ದ ಲಸಿಕಾ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಪ್ರಥಮ ಹಂತದಲ್ಲಿ ಪ್ರತಿಯೊಂದು ಲಸಿಕಾ ಕೇಂದ್ರದ 5 ಅಧಿಕಾರಿಗಳನ್ನು ಒಳಗೊಂಡ ತಂಡಕ್ಕೆ ಸೂಕ್ತ ತರಬೇತಿ ನೀಡಲಾಗಿದೆ ಎಂದರು.

ಇದಕ್ಕಾಗಿ ಮೂರು ಕೊಠಡಿಗಳನ್ನು ಸಿದ್ದಪಡಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ -19 ಲಸಿಕೆಯನ್ನು ಹೊರತುಪಡಿಸಿ ಉಳಿದೆಲ್ಲ ಪೂರ್ವಾಭ್ಯಾಸ ಕೈಗೊಳ್ಳಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.