ಸೋಮವಾರ, ಆಗಸ್ಟ್ 2, 2021
25 °C

ವಿಜಯಪುರ | ಕೋವಿಡ್‌ಗೆ ವೃದ್ದ ಸಾವು; 118 ಜನರಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಲ್ಲಿ 85 ವರ್ಷ ವಯಸ್ಸಿನ ವೃದ್ಧರೊಬ್ಬರು (ಪಿ35217) ಕೋವಿಡ್‌ನಿಂದ ಶುಕ್ರವಾರ ಸಾವನಪ್ಪಿದ್ದಾರೆ.

ತೀವ್ರ ಜ್ವರ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು ಜುಲೈ 8 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

118 ಜನರಿಗೆ ಸೋಂಕು: ಜಿಲ್ಲೆಯಲ್ಲಿ ಶುಕ್ರವಾರ 118 ಜನರಿಗೆ ಕೋವಿಡ್‌ ಪಾಸಿಟಿವ್‌ ದೃಢವಾಗಿದ್ದು, ಇದುವರೆಗಿನ ಸೋಂಕಿತರ ಸಂಖ್ಯೆ 1238ಕ್ಕೆ ಏರಿಕೆಯಾಗಿದೆ. ಶುಕ್ರವಾರ 84 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 803 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು