ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ: ಡಿಸಿ ಪರಿಶೀಲನೆ

ಇಂಡಿ ಪಟ್ಟಣದ ಮತಗಟ್ಟೆಗಳಿಗೆ ಭೇಟಿ; ಅಧಿಕಾರಿಗಳಿಗೆ ಸೂಚನೆ
Last Updated 27 ನವೆಂಬರ್ 2022, 14:16 IST
ಅಕ್ಷರ ಗಾತ್ರ

ವಿಜಯಪುರ:ಇಂಡಿ ಪಟ್ಟಣದ ಮನೆಮನೆಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ಭಾನುವಾರ ಖುದ್ದು ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು.

ಇಂಡಿ ಪಟ್ಟಣದ ಮತಗಟ್ಟೆ ಸಂಖ್ಯೆ 113 ರ ಕೆಇಬಿ ನಗರ ಹಾಗೂ ಮತಗಟ್ಟೆ ಸಂಖ್ಯೆ 110ರಲ್ಲಿ ಬರುವ ಬೀರಪ್ಪ ನಗರದ ಮನೆಮನೆಗೆ ಭೇಟಿ ನೀಡಿ ಪರಿಷ್ಕರಣೆ ಹಂತದ ವಿವರ ಪರಿಶೀಲಿಸಿದದರು.

ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಜಿಲ್ಲೆಯಲ್ಲಿ ನಡೆಯುತ್ತಿದೆ. ಈಗಾಗಲೇ ಕರಡು ಮತದಾರರ ಪಟ್ಟಿ ಜಿಲ್ಲೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತಗಟ್ಟೆಯ ಅಧಿಕಾರಿಗಳಿಗೆ ಅಗತ್ಯ ದಾಖಲೆ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.

ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವದನ್ನು (Voter Help line
Mobile App Or NVSP Portal Or www.ceo.karnataka.gov.in) ಮುಖಾಂತರ ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬಹುದು ಎಂದರು.

ಖಚಿತಪಡಿಸಿಕೊಂಡ ನಂತರ ಹೊಸದಾಗಿ ಮತದಾರ ಸೇರ್ಪಡೆಗೆ ನಮೂನೆ 6, ಮತದಾರರ ಗುರುತಿನ ಚೀಟಿಗೆ ಆಧಾರ ಸಂಖ್ಯೆ ಅಥವಾ ಇತರೆ ದಾಖಲೆಗಳ ಜೋಡಣೆ ಮಾಡಲು ನಮೂನೆ 6ಬಿ, ಮತದಾರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದು ಹಾಕಲು ನಮೂನೆ 7ಅನ್ನು, ಮತದಾರರ ಪಟ್ಟಿಯಲ್ಲಿನ ತಿದ್ದುಪಡಿ, ಬದಲಿ ಗುರುತಿನ ಚೀಟಿ, ಮತದಾರರು ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಅಥವಾ ಒಂದೇ ವಿಧಾನಸಭಾ ಕ್ಷೇತ್ರದಲ್ಲಿರುವ ಭಾಗಕ್ಕೆ ಸ್ಥಳಾಂತರಕ್ಕಾಗಿ ನಮೂನೆ 8ರಲ್ಲಿ, ಹಕ್ಕು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು ಆಯಾ ಮತಗಟ್ಟೆಯ ವ್ಯಾಪ್ತಿಯಲ್ಲಿ ಮನೆ ಮನೆ ಸರ್ವೇ ಕಾರ್ಯವನ್ನು ಕೈಗೊಳ್ಳಲಿದ್ದು, ಹೊಸ ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವುದು ಹಾಗೂ ಇತರೆ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ತೋರದೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆಯೂ, ಪ್ರತಿ ಮನೆಮನೆಗೂ ಭೇಟಿ ನೀಡಿ ಸರ್ವೆ ಮಾಡಿ, ನಿಖರ ಮಾಹಿತಿ ದಾಖಲಿಸಲು 18 ವರ್ಷದ ವಯೋಮಾನದ ಯುವ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹೊಸ ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಇತ್ಯಾದಿ, ಆನ್‍ಲೈನ್ ಪ್ಲ್ಯಾಟ್ ಫಾರ್ಮಗಳಾದ ವಿ.ಎಚ್.ಎ, ಎನ್.ವಿ.ಎಸ್.ಪಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಸಿ ಗರುಡ ಆ್ಯಪ್ ಮೂಲಕವೂ ಕೂಡಾ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದರು.

ಹೊರ ಜಿಲ್ಲೆಗಳಿಂದ ಜಿಲ್ಲಾ ದೂರು ನಿರ್ವಹಣಾ ಕೇಂದ್ರಕ್ಕೆ ಕರೆ ಮಾಡಲು ಟೋಲ್ ಫ್ರೀ ಸಂಖ್ಯೆ 08352-1950ಕ್ಕೆ ಸಂಪರ್ಕಿಸಬಹುದಾಗಿದೆ. ಹಕ್ಕು ಮತ್ತು ಆಕ್ಷೇಪಣೆ ಸಮಯದಲ್ಲಿ ಸ್ವೀಕೃತವಾಗುವ ಎಲ್ಲ ಆಕ್ಷೇಪಣೆಗಳನ್ನು ಡಿಸೆಂಬರ್‌ 26 ರೊಳಗಾಗಿ ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಿದರು.

ಜನವರಿ 5 ರಂದು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಕಂದಾಯ ನಿರೀಕ್ಷಕ ಎಚ್.ಎಚ್.ಗುನ್ನಾಪೂರ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT