ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿ ನಿವೇಶನ: ಸ್ವಚ್ಛತೆ ಕಾಪಾಡದವರಿಗೆ ನೋಟಿಸ್‍ ನೀಡಿ

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸೂಚನೆ
Last Updated 11 ಜನವರಿ 2021, 16:00 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿನ ಕಾಳಿಕಾನಗರಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಖಾಲಿ ಇದ್ದ ಜಾಗಗಳನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಖಾಲಿ ಜಾಗದಲ್ಲಿ ಸಾರ್ವಜನಿಕರು ಕಸಕಡ್ಡಿ ಎಸೆಯುತ್ತಾರೆ. ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿ, ಖಾಲಿ ನಿವೇಶನದ ಮಾಲೀಕರಿಗೆ ನೋಟಿಸ್‍ ಜಾರಿ ಮಾಡಿ, ಸ್ವಚ್ಛಗೊಳಿಸಿದ ಖರ್ಚನ್ನು ಅವರಿಂದ ವಸೂಲಿ ಮಾಡಿ ಎಂದು ಸೂಚಿಸಿದರು.

ಗುರುರಾಜ ಕಾಲೊನಿಯಲ್ಲಿರುವ ಕಂದಕಕ್ಕೆ ಭೇಟಿ ನೀಡಿ ಕಂದಕದಲ್ಲಿರುವ ಕಸವನ್ನು ಸ್ವಚ್ಛಗೊಳಿಸಿ, ಅದರಲ್ಲಿರುವ ನೀರನ್ನು ಸ್ವಚ್ಛಗೊಳಿಸಿ ಅದರಲ್ಲಿರುವ ನೀರನ್ನು ವಾಣಿಜ್ಯೋದ್ಯಮಕ್ಕೆ ಬಳಸುವಂತೆ ಯೋಜನೆ ರೂಪಿಸಲು ಸೂಚಿಸಿದರು.

ಕಂದಕದ ಸುತ್ತಲೂ ಯಾವುದೇ ದನ, ಕರುಗಳು ಹೋಗದಂತೆ ಗೋಡೆ ನಿರ್ಮಿಸಲು ಕ್ರಮ ಕೈಗೊಳ್ಳಿ ಎಂದು ಅವರು ಹೇಳಿದರು.

ಯಾವುದೇ ಸಾರ್ವಜನಿಕ ಆಸ್ತಿಗಳು ಒತ್ತುವರಿಯಾಗದಂತೆ ನೋಡಿಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT