ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಗಳ ಪ್ರವೇಶಾತಿ ಪರೀಕ್ಷೆ ಮಾರ್ಚ್‌ 12ಕ್ಕೆ

Last Updated 11 ಮಾರ್ಚ್ 2023, 15:56 IST
ಅಕ್ಷರ ಗಾತ್ರ

ವಿಜಯಪುರ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಮಾರ್ಚ್ 12 ರಂದು ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ವಿಜಯಪುರ ನಗರಗಳಲ್ಲಿನ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 15,196 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದರು.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ, ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು.

ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳಲ್ಲಿ ಪರೀಕ್ಷಾ ನಿಯಮಗಳನ್ನು ಎಲ್ಲರೂ ಚಾಚು ತಪ್ಪದೇ ಪಾಲಿಸಬೇಕು. ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಸಿಬ್ಬಂದಿ ಮೇಲೆ ಶಿಸ್ತಿನ ಕ್ರಮಜರುಗಿಸಲಾಗುವುದು ಎಂದರು.

ಪರೀಕ್ಷಾ ಕೇಂದ್ರದ ಒಳಗೆ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ನೀಡಬಾರದು. ಪರೀಕ್ಷಾರ್ಥಿಗಳು ಮೊಬೈಲ್, ಪೇಜರ್ ಸೇರಿದಂತೆ ಇನ್ನೀತರ ಯಾವುದೇ ಇಲೆಕ್ಟ್ರಾನಿಕ್ ಸಲಕರಣೆ ಬಳಸದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎನ್ ಬಗಲಿ, ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕ ರಾಜಗೋಪಾಲ, ಝಳಕಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಹೊಸಮನಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT