ಸೋಮವಾರ, ಜನವರಿ 25, 2021
17 °C

ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ಸ್ಥಾಪನೆ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ಐತಿಹಾಸಿಕ ಆನಂದ ಮಹಲ್ ಪಾರಂಪರಿಕ ಕಟ್ಟಡದಲ್ಲಿ ₹ 5 ಕೋಟಿ ಅಂದಾಜು ವೆಚ್ಚದಲ್ಲಿ ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಹೇಳಿದರು.

ನಗರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಳ್ಳಲಾದ ಪ್ರಸ್ತಾವನೆಗಳ ಕುರಿತು ಪ್ರವಾಸೋದ್ಯಮ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

₹ 1.36 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ನಗರದ ಪ್ರಮುಖ ಐತಿಹಾಸಿಕ ಸ್ಮಾರಕಗಳ ಬಳಿ ನಿರ್ಮಿಸಲಾಗಿರುವ ಉದ್ಯಾನಗಳಿಗೆ ಗಗನ ಮಹಲ್ ಕಂದಕದಿಂದ ನೀರು ಸರಬರಾಜು ಮಾಡುವ ಕಾಮಗಾರಿ ಕುರಿತು ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಸಭೆಯ ಬಳಿಕ ನಗರದ ಐತಿಹಾಸಿಕ ಸ್ಮಾರಕ ಆನಂದ ಮಹಲ್, ಹೆರಿಟೇಜ್ ಪಾಥ್‌ವೇ ಕಾಮಗಾರಿ, ಗಗನ ಮಹಲ್ ಕಂದಕದಿಂದ ಇತರೆ ಸ್ಮಾರಕಗಳಿಗೆ ನೀರು ಪೂರೈಕೆ ಮಾಡುವ ಸ್ಥಳಗಳನ್ನು ಪರಿಶೀಲಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಕಾರ್ಯ ನಿರ್ವಹಿಸುತ್ತಿರುವ ನಗರದ ಹರಣಶಿಕಾರಿಯಲ್ಲಿರುವ ವೀಕ್ಷಣಾಲಯ ಹಾಗೂ ಮನಗೂಳಿ ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು