ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್ ಮಾಸ್ಕ್ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ: ಡಿಸಿ

ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ
Last Updated 30 ಏಪ್ರಿಲ್ 2022, 11:08 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕೆಲವು ದಿನಗಳಿಂದ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.

ಸರ್ಕಾರದ ಆದೇಶದ ಮೇರೆಗೆ ರಾಜ್ಯ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸು ಪ್ರಕಾರ ಕೋವಿಡ್ ನಿಯಂತ್ರಣ ಕುರಿತು ಅಗತ್ಯ ಮುಂಜಾಗ್ರತಾ ಕ್ರಮಗಳಾದ ಫೇಸ್ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆಎಂದು ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಅಗತ್ಯಾನುಸಾರ ಸರಿಯಾಗಿ ಮಾಸ್ಕ್‌ ಧರಿಸದಿದ್ದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ₹ 250 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ₹ 100 ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ದೈಹಿಕ ಅಂತರ: ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 2 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಹಕರಲ್ಲಿ ದೈಹಿಕ ಅಂತರ ಇರುವುದನ್ನು ಅಂಗಡಿಗಳ ಮಾಲೀಕರು ಖಚಿತಪಡಿಸಬೇಕು ಎಂದು ಸೂಚಿಸಿದ್ದಾರೆ.

ಉಗಿದರೆ ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಉಗಿದರೆ ದಂಡ ವಿಧಿಸಲಾಗುವುದು. ಮಹಾನಗರ ಪಾಲಿಕೆ, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳುದಂಡ ವಿಧಿಸಲು ಕ್ರಮಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT