ಗುರುವಾರ , ಮಾರ್ಚ್ 23, 2023
32 °C

ಭಯವಿಲ್ಲದೇ ಪರೀಕ್ಷೆ ಎದುರಿಸಿ: ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜುಲೈ 19 ಮತ್ತು 22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಶುಭ ಹಾರೈಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜರ್, ಮಾಸ್ಕ್‌, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು ಎಂದು ಹೇಳಿದ್ದಾರೆ.

ಶಹಾಪೂರ ಶುಭ ಹಾರೈಕೆ:

ವಿಧಾನಪರಿಷತ್ ಸದಸ್ಯರು ಅರುಣ ಶಹಾಪೂರ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಜಿಲ್ಲೆಯ ಯಾವುದೇ ವಿದ್ಯಾರ್ಥಿಯು ಪರೀಕ್ಷೆಯಿಂದ ವಂಚಿತರಾಗದೆ ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಿ. ಪರೀಕ್ಷಾ ಕೇಂದ್ರವನ್ನು ಸುರಕ್ಷತಾ ಕೇಂದ್ರ ಎಂದು ಭಾವಿಸಿ, ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆದು ಉತ್ತಮ ಫಲಿತಾಂಶ ಪಡೆಯುವ ಮೂಲಕ ತಮ್ಮ ಶಾಲೆಗೆ ಮತ್ತು ನಮ್ಮ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು