ವಿಜಯಪುರ: ಜೈಲಿನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಎಲ್ಲ 27 ಜನರ ಮೇಲಿನ ಸುಳ್ಳು ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಎಸ್ಯುಸಿಐ(ಸಿ) ಪಕ್ಷದ ರಾಜ್ಯ ಸೆಕ್ರೆಟರಿಯಟ್ ಸದಸ್ಯ ಟಿ.ಎಸ್. ಸುನಿತ್ಕುಮಾರ್ ಆಗ್ರಹಿಸಿದರು.

ನಗರದಲ್ಲೊ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪರ ಹೋರಾಟವನ್ನು ಹತ್ತಿಕ್ಕುವ ಪಿತೂರಿಯಲ್ಲದೆ ಬೇರೇನೂ ಅಲ್ಲ. ಈ ಕೇಸುಗಳನ್ನು ರದ್ದುಪಡಿಸಿ, ವಿನಾಕಾರಣ ಬಂಧಿತರಾದ ಅನಿಲ್ ಹೊಸಮನಿ, ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಸಂಗನಬಸವ ಸ್ವಾಮೀಜಿ, ಭೋಗೇಶ ಸೋಲಾಪುರ ಹಾಗೂ ಸಿದ್ರಾಮ ಹಳ್ಳೂರ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ರಾಜ್ಯದಾದ್ಯಾಂತ ನಮ್ಮ ಸಂಘಟನೆಗಳಿಂದ ಎಲ್ಲರನ್ನು ಬಿಡುಗಡೆ ಮಾದಲು ಆಗ್ರಹಿಸಿ ಹೋರಾಟ ಮಾಡಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮತ್ತೆ ರಾಜ್ಯದಾದ್ಯಂತ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರಜಾಪ್ರಬುತ್ವ ರಾಷ್ಟ್ರದಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಆ ಹೋರಾಟದ ಧ್ವನಿಯನ್ನು ಹತ್ತಿಕ್ಕುವುದು ಜನವಿರೋಧಿ ನಡೆಯಾಗುತ್ತದೆ. ಹೋರಾಟಗಾರರನ್ನು ಬಿಡುಗಡೆ ಮಾಡಿ ಹಾಗೂ ಈ ಕೂಡಲೇ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಿ, ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಪಕ್ಷದ ಮುಖಂಡರಾದ ಸಿದ್ರಾಮಯ್ಯ ಹಿರೇಮಠ, ಶಿವರಂಜನಿ ಎಸ್. ಬಿ. ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.