ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾತಿ ಪ್ರಮಾಣಪತ್ರ: ಕ್ರಮಕ್ಕೆ ಒತ್ತಾಯ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು ಆಗ್ರಹ
Last Updated 6 ಏಪ್ರಿಲ್ 2022, 13:03 IST
ಅಕ್ಷರ ಗಾತ್ರ

ವಿಜಯಪುರ: ವೀರಶೈವ ಜಂಗಮರಾಗಿದ್ದೂಬೇಡ ಜಂಗಮ ಹೆಸರಿನಲ್ಲಿ ತಮ್ಮ ಮಕ್ಕಳಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕುಹಾಗೂ ಸರ್ಕಾರ ಅವರವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ರೇಣುಕಾಚಾರ್ಯ ಅವರ ಮಕ್ಕಳು ಸುಳ್ಳು ಜಾತಿ ಪ್ರಮಾಣ ಪತ್ರ ತೆಗೆದುಕೊಂಡಿರುವುದನ್ನು ಕೂಡಲೇ ರದ್ದುಪಡಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರೇಣುಕಾಚಾರ್ಯ ಪ್ರಕರಣವನ್ನುಸರ್ಕಾರ ತನಿಖೆಗೆ ಒಳಪಡಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದನ್ನು ರೇಣುಕಾಚಾರ್ಯ ಅವರೇ ವಿಧಾನಸಭಾ ಅಧಿವೇಶನದಲ್ಲಿ ಒಪ್ಪಿಕೊಂಡಿದ್ದರೂ ನಿರ್ಲಜ್ಜ ಸರ್ಕಾರ ಇದುವರೆಗೆ ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು.

ಬೇಡ ಜಂಗಮರ ಹೆಸರಿನಲ್ಲಿ ವೀರಶೈವ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡಲೇಬಾರದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಅಧಿಕಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಡಿಎಸ್‌ಎಸ್‌ ಸೇರ್ಪಡೆ:

ಡಿಎಸ್‌ಎಸ್‌ ಲಕ್ಷ್ಮಿ ನಾರಾಯಣ ನಾಗವಾರ ಬಣದ ಮುಖಂಡರಾದ ಬಸವರಾಜ ಮುಧೋಳ, ಕಲ್ಲಪ್ಪ ಕಾಂಬಳೆ, ಶಿವಾಜಿ ಬನವಾಸಿ, ಖ್ಯಾತನಹಳ್ಳಿ ಶ್ರೀನಿವಾಸ, ಎಚ್‌.ಎನ್‌.ನೀಲನಾಯಕ, ನಿಂಗಪ್ಪ ಹಾವೇರಿ, ಗೋವಿಂದರಾಜ ಮುಂತಾದವರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ) ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.

ವಿಜಯಪುರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಏಪ್ರಿಲ್‌ 9ರಂದು ಬೆಳಿಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖಂಡರು ಡಿಎಸ್‌ಎಸ್‌ ಸೇರ್ಪಡೆಯಾಗಲಿದ್ದಾರೆ. ಅದೇ ದಿನ ಸುಳ್ಳು ಜಾತಿ ಪ್ರಮಾಣಪತ್ರದ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದರು.

ಡಿಎಸ್‌ಎಸ್‌ ರಾಜ್ಯ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ, ವೈ.ಸಿ.ಮಯೂರ, ರಮೇಶ ಧರಣಾಕರ, ಅಶೋಕ ಚಲವಾದಿ, ಸಿದ್ದು ರಾಯಣ್ಣನವರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

***

ರಾಜ್ಯ ಸರ್ಕಾರಕ್ಕೆ ಎಸ್‌ಸಿ, ಎಸ್‌ಟಿಗಳ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಎಸ್‌ಸಿ, ಎಸ್‌ಟಿಗಳ ಹಕ್ಕು ಅಪಹರಣವಾಗುತ್ತಿದೆ. ಈ ವರ್ಗಗಳ ಏಳಿಗೆಗೆ ಬಜೆಟ್‌ನಲ್ಲಿ ಅನುದಾನ ಕಡಿತಗೊಳಿಸಲಾಗಿದೆ

–ಡಿ.ಜಿ.ಸಾಗರ್‌,ರಾಜ್ಯ ಸಂಚಾಲಕ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT